ಮದುವೆಯಾದ ಎರಡನೇ ದಿನಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಯುವತಿ; ಪೊಲೀಸ್​ ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ

baby
Published on

ಭೋಪಾಲ್​: ಮದುವೆಯಾದ ಎರಡನೇ ದಿನಕ್ಕೆ ನವವಿವಾಹಿತಳೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ಧಾರ್​ ಜಿಲ್ಲೆಯ ಧರ್ಮಪುರಿ ತಾಲ್ಲೂಕಿನ ಗುಜರಿ ಎಂಬ ಗ್ರಾಮದಲ್ಲಿ ನಡೆದಿದೆ. ಧಮ್ನೋಡ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೇ 20ರಂದು ಯುವತಿಗೆ ಗುಜರಿ ಗ್ರಾಮದ ವ್ಯಕ್ತಿಯೊಂದಿಗೆ ಮದುವೆಯಾಗಿದ್ದು, ಮೇ 22ರ ಬೆಳಗಿನ ಜಾವ ಯುವತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಆಕೆ ತುಂಬು ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದು, ಇದಾದ ಕೆಲವೇ ಕ್ಷಣಗಳಿಗೆ ಆಕೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ವಿಚಾರ ತಿಳಿದು ಆಘಾತಕ್ಕೊಳಗಾದ ವರನ ಕುಟುಂಬಸ್ಥರು ಆಕೆಯನ್ನು ಪ್ರಶ್ನಿಸಿದಾಗ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೋರ್ವ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಹಿಳೆ ಹೇಳಿದ್ದಾಳೆ.

harassment

ಯುವತಿಯ ಕುಟುಂಬಸ್ಥರು ನೀಡಿದ ದೂರನ್ನು ಆಧರಿಸಿ ಆರೋಪಿ ಸುನಿಲ್​ ಬಾಘೇಲ್​ನನ್ನು ವಶಕ್ಕೆ ಪಡೆದಿದ್ದು, ಆರೋಪಿಯು ಯುವತಿಯನ್ನು ಎರಡು ವರ್ಷಗಳ ಹಿಂದೆ ಮದುವೆ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದಾಗಿ ಹೇಳಿದ್ದಾನೆ. ಬಳಿಕ ಇಬ್ಬರು ಪರಸ್ಪರ ನಂಬರ್​ ವಿನಿಮಯ ಮಾಡಿಕೊಂಡಿದ್ದು, ನಿಯಮಿತವಾಗಿ ಸಂವಹನ ಮಾಡಲು ಪ್ರಾರಂಭಿಸಿದರು. ಸುನೀಲ್ ಕಚ್ವಾನಿಯಾದಲ್ಲಿ ಅವಳನ್ನು ಅನೇಕ ಬಾರಿ ಭೇಟಿ ಮಾಡಿದ್ದಾನೆ ಮತ್ತು ಸುಮಾರು ಒಂಬತ್ತು ತಿಂಗಳ ಹಿಂದೆ, ಮದುವೆಯ ಭರವಸೆ ನೀಡಿ ಹೊಲವೊಂದರಲ್ಲಿ ಅತ್ಯಾಚಾರವೆಸಗಿದ್ದಾನೆ.

ತಾನು ಗರ್ಭಿಣಿಯಾಗಿರುವುದಾಗಿ ಯುವತಿ ಆರೋಪಿಗೆ ತಿಳಿಸಿದ್ದಾಳೆ. ಇದರಿಂದ ಕುಪಿತಗೊಂಡ ಆರೋಪಿಯು ಆಕೆಯ ಮೇಲೆ ಹಲ್ಲೆ ನಡೆಸಿದ್ದು, ತನಗೆ ಈಗಾಗಲೇ ಮದುವೆಯಾಗಿರುವುದಾಗಿ ತಿಳಿಸಿದ್ದಾನೆ. ಬೆದರಿಕೆ ಮತ್ತು ಸಾಮಾಜಿಕ ಕಳಂಕಕ್ಕೆ ಹೆದರಿ ಯುವತಿ ಈ ಘಟನೆಯನ್ನು ತನ್ನ ಕುಟುಂಬದಿಂದ ಗೌಪ್ಯವಾಗಿಟ್ಟಿದ್ದಳು. ಇದೀಗ ಈ ವಿಚಾರ ಬೆಳಕಿಗೆ ಬಂದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net