ಮೂರು ತಿಂಗಳ ಹಿಂದಷ್ಟೇ ಪ್ರೇಮವಿವಾಹ ಆಗಿದ್ದಾಕೆಯ ಸಾವು!

Geetha
Published on

ಕೋಲಾರ: ಮೂರು ತಿಂಗಳ ಹಿಂದಷ್ಟೇ ಪ್ರೇಮವಿವಾಹವಾಗಿದ್ದ ಯುವತಿಯೊಬ್ಬಳು ಇಂದು ಸಾವಿಗೀಡಾಗಿದ್ದಾಳೆ. ಈಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೋಲಾರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಡಿ.ಕೆ.ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಾ (25) ಸಾವಿಗೀಡಾದ ಮಹಿಳೆ. ಪ್ರವೀಣ್ ಎಂಬಾತನನ್ನು ಪ್ರೀತಿಸುತ್ತಿದ್ದ ಈಕೆ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು.

ಮನೆಯಲ್ಲಿ ಯಾರೂ ಇಲ್ಲದ ವೇಳೆ‌ ಈಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಮಧ್ಯಾಹ್ನ ಮನೆಗೆ ಊಟಕ್ಕೆಂದು ಬಂದಾಗ ಗೊತ್ತಾಗಿದೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net