ಬೈಕ್‌ನಿಂದ ಬಿದ್ದು ಮಹಿಳೆ ಸಾವು

Published on

ಕುಣಿಗಲ್: ರಾಷ್ಟ್ರೀಯ ಹೆದ್ದಾರಿ 75ರ ಬಿಳಿದೇವಾಲಯದ ಬಳಿ ಶುಕ್ರವಾರ ಬೈಕ್‌ಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನಿಂದ ಬಿದ್ದ ಮಹಿಳೆ ಮೃತಪಟ್ಟಿದ್ದು, ಅವರ ಪತಿ ಹಾಗೂ ಪುತ್ರ ಗಾಯಗೊಂಡಿದ್ದಾರೆ.

ಬೆಂಗಳೂರು ವಿಜಯನಗರ ನಿವಾಸಿ ಗೀತಾ(33) ಮೃತೆ. ಪತಿ ಸಂತೋಷ್ ಹಾಗೂ ಮಗ ತರುಣ್ ಗಾಯಗೊಂಡವರು. ಕುಣಿಗಲ್ ತಾಲೂಕು ಬ್ಯಾಲದಕೆರೆಯ ಬೆಲ್ವರಮ್ಮ, ಹರಿಮಾರಮ್ಮ ದೇವಾಲಯಕ್ಕೆ ಬಂದು ಪೂಜೆ ಮುಗಿಸಿ ಬೆಳಗ್ಗೆ 10ಗಂಟೆಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಬೈಕ್‌ಗೆ ಅಡ್ಡಬಂದ ನಾಯಿಯನ್ನು ಉಳಿಸಲು ಹೋಗಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net