

Odisha River: ಮೊಸಳೆ ದಾಳಿಗೆ 45 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಒಡಿಶಾದ ಕೇಂದ್ರಪಾರ ಜಿಲ್ಲೆಯಲ್ಲಿ ಸೋಮವಾರ (ಜೂ.16) ನಡೆದಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಭಿತರ್ಕನಿಕಾ ರಾಷ್ಟ್ರೀಯ ಉದ್ಯಾನವನದ ಬಳಿಯ ರಾಜನಗರ ಅರಣ್ಯ ವ್ಯಾಪ್ತಿಯ ತನ್ಲಾಡಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಖರಸ್ರೋಟ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಹಿಳೆಯನ್ನು ಮೊಸಳೆ ನೀರಿಗೆ ಎಳೆದೊಯ್ದಿದೆ ಎಂದು ಉದ್ಯಾನವನದ ಅರಣ್ಯ ಶ್ರೇಣಿ ಅಧಿಕಾರಿ ಚಿತ್ತರಂಜನ್ ಬ್ಯೂರಾ ಹೇಳಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ನೀಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
ವೈದ್ಯಕೀಯ-ಕಾನೂನು ವಿಧಿವಿಧಾನಗಳು ಪೂರ್ಣಗೊಂಡ ನಂತರ ಅರಣ್ಯ ಇಲಾಖೆಯು ಮೃತಳ ಕುಟುಂಬಕ್ಕೆ 10 ಲಕ್ಷ ರೂ.ಗಳ ಪರಿಹಾರವನ್ನು ನೀಡುತ್ತದೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)