ಮಹಿಳೆಯ ಗಂಟಲು ಕೊಯ್ದು, ದೇಹದಿಂದ ಕಾಲು ಬೇರ್ಪಡಿಸಿದ ದುರುಳರು..

police 3
ಸಾಂದರ್ಭಿಕ ಚಿತ್ರ
Published on

ಸಿದ್ದಿಪೇಟ್: ಮಹಿಳೆಯ ಗಂಟಲು ಕತ್ತರಿಸಿ ಕಾಲುಗಳನ್ನು ದೇಹದಿಂದ ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಬಂದಮೈಲಾರಂನಲ್ಲಿ ನಡೆದಿದೆ.

ಮುಳುಗು ಮಂಡಲದ ವೆಂಕಟಮ್ಮ(40) ಮೃತ ಮಹಿಳೆಯಾಗಿದ್ದು, ಈಕೆಯ ಪತಿ ಈ ಹಿಂದೆಯೇ ಮೃತಪಟ್ಟಿದ್ದನು. ಈಕೆ ತನ್ನ ಮೂವರು ಮಕ್ಕಳೊಂದಿಗೆ ಹಳ್ಳಿಯಲ್ಲಿ ವಾಸಿಸುತ್ತಿದ್ದು, ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಳು.

ಆದರೆ ನಿನ್ನೆ ರಾತ್ರಿ ಅಪರಿಚಿತ ದುಷ್ಕರ್ಮಿಗಳು ವೆಂಕಟಮ್ಮ ಮನೆಗೆ ನುಗ್ಗಿ ಕೊಲೆ ಮಾಡಿದ್ದು, ಮೊದಲು ಕತ್ತು ಕೊಯ್ದು, ನಂತರ ದೇಹದಿಂದ ಕಾಲುಗಳನ್ನು ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಹಿಳೆಯೊಬ್ಬಳನ್ನು ಅಮಾನುಷವಾಗಿ ಕಾಲುಗಳನ್ನು ಬೇರ್ಪಡಿಸಿ ಹತ್ಯೆ ಮಾಡಿರುವುದು ಸ್ಥಳೀಯರಲ್ಲಿ ಸಂಚಲನ ಮೂಡಿಸಿದೆ. ತನಿಖೆಯ ನಂತರ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net