ಆತ್ಮಹತ್ಯೆಗಾಗಿ ತುಂಗಭದ್ರಾ ನದಿಗೆ ಹಾರಿ ಮಹಿಳೆಯ ರಕ್ಷಣೆ

31-RNR-01
Published on

ರಾಣೆಬೆನ್ನೂರ: ಅಗರಬತ್ತಿ ್ಯಾಕ್ಟರಿ ಮಾಡುವ ಸಲುವಾಗಿ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ತುಂಗಭದ್ರಾ ನದಿಗೆ ಹಾರಿದ ಮಹಿಳೆಯೊಬ್ಬಳು ಇಡೀ ರಾತ್ರಿ ನದಿಯಲ್ಲಿನ ಗಿಡ ಹಿಡಿದು ಜೀವ ಉಳಿಸಿಕೊಂಡ ಘಟನೆ ತಾಲೂಕಿನ ಕೋಟಿಹಾಳ-&ನಿಟಪಳ್ಳಿ ಗ್ರಾಮದ ಬಳಿ ನಡೆದಿದೆ.

ರಟ್ಟಿಹಳ್ಳಿ ಪಟ್ಟಣದ ನಿವಾಸಿ ಹಾಗೂ ಕುಮುದ್ವತಿ ಮಹಿಳಾ ಸಂದ ಅಧ್ಯೆ ರೂಪಾ ಶಿವಪ್ಪ ಅಂಬಲಿ (42) ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದವಳು.

ಈಕೆ ಹರಿಹರ ತಾಲೂಕಿನ ನಂದಿಗುಡಿ ಸೇತುವೆಯಿಂದ ಬುಧವಾರ ರಾತ್ರಿ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಳು. ಆದರೆ, ಈಜು ಬರುತ್ತಿದ್ದ ಕಾರಣ ಸುಮಾರು ಕಿ.ಮೀ.ನಷ್ಟು ದೂರ ಈಜುತ್ತ ಬಂದು ಕೋಟಿಹಾಳ-&ನಿಟಪಳ್ಳಿ ಗ್ರಾಮದ ಬಳಿ ನದಿ ಮಧ್ಯೆ ದೊರೆತ ಗಿಡ ಹಿಡಿದುಕೊಂಡು ಜೀವ ಉಳಿಸಿಕೊಂಡಿದ್ದಾಳೆ.

ನಸುಕಿನ ಜಾವ ಮಹಿಳೆಯ ಕೂಗಾಟ ಕೇಳಿದ ಸ್ಥಳಿಯರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೋಟ್​ ಮೂಲಕ ತೆರಳಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಮಹಿಳೆಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿದರು. ಈ ಸಮಯದಲ್ಲಿ ಮಾತನಾಡಿದ ರೂಪಾ, ಅಗರಬತ್ತಿ ಮಾಡುವ ಸಲುವಾಗಿ 22 ಲಕ್ಷ ರೂ. ಸಾಲ ಮಾಡಿಕೊಂಡಿದ್ದೆ. ಅದು ಈಗ 2 ಕೋಟಿ ರೂ. ಅಧಿಕವಾಗಿದೆ. ಅಲ್ಲದೆ ಸಾಲಗಾರರ ಕಾಟದಿಂದ ಬೇಸತ್ತು ಹೀಗೆ ಮಾಡಿದ್ದೇನೆ ಎಂದು ಹೇಳಿಕೊಂಡಳು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಸಾಲದ ಹಣಕ್ಕಾಗಿ ತೊಂದರೆ ನೀಡಿದವರ ವಿರುದ್ಧ ದೂರು ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಪೊಲೀಸರಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net