VIDEO | ಶಿವಲಿಂಗದ ಮೇಲೆ ನೋಟುಗಳನ್ನು ಎಸೆದ ಮಹಿಳೆ!

currency note
Published on

ಉತ್ತರಾಖಂಡ: ಕೇದಾರನಾಥ ದೇಗುಲದ ಗರ್ಭಗುಡಿಯೊಳಗಿನ ಶಿವಲಿಂಗದ ಮೇಲೆ ಮಹಿಳೆಯೊಬ್ಬರು ಕರೆನ್ಸಿ ನೋಟುಗಳನ್ನು ಎಸೆಯುತ್ತಿರುವ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.

ಉತ್ತರಾಖಂಡದ ಕೇದಾರನಾಥ ದೇವಾಲಯದ ಗರ್ಭಗುಡಿಯಲ್ಲಿ, ಶಿವಲಿಂಗದ ಮೇಲೆ ಮಹಿಳೆಯೊಬ್ಬರು ನೋಟುಗಳನ್ನು ಸುರಿಯುತ್ತಿರುವುದು ಕಂಡುಬಂದಿದೆ. ಈ ಘಟನೆಯನ್ನು ಕ್ಯಾಮರಾದಲ್ಲಿ ಚಿತ್ರೀಕರಿಸಲಾಗಿದ್ದು, ಇದೀಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ವೀಕ್ಷಕರಿಂದ ಅಸಮಾಧಾನ ವ್ಯಕ್ತವಾಗಿದೆ.

ಈ ಬಗ್ಗೆ ಅಗತ್ಯ ಹಾಗೂ ತಕ್ಷಣ ಕ್ರಮ ಕೈಗೊಳ್ಳುವಂತೆ ದೇವಸ್ಥಾನದ ಅಧಿಕಾರಿಗಳು ಪೊಲೀಸರನ್ನು ಆಗ್ರಹಿಸಿದ್ದಾರೆ. ಮಹಿಳೆಯ ಗುರುತು ಇನ್ನೂ ತಿಳಿದುಬಂದಿಲ್ಲ. ಶ್ರೀ ಬದರಿನಾಥ ಕೇದಾರನಾಥ ದೇವಾಲಯ ಸಮಿತಿಯು ಅಧ್ಯಕ್ಷ ಅಜೇಂದ್ರ ಅಜಯ್, ವೈರಲ್ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net