ಬೈಕ್‌ಗೆ ಬಸ್ ಡಿಕ್ಕಿಯಾಗಿ ಹಿಂಬದಿ ಕುಳಿತ್ತಿದ್ದ ಮಹಿಳೆ ಸಾವು

Published on

ಹೊಳೆನರಸೀಪುರ: ತಾಲೂಕಿನ ಸೂರನಹಳ್ಳಿ ಸಮೀಪ ಹಿಂದಿನಿಂದ ಬಂದ ಬೈಕಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಕುಳಿತ್ತಿದ್ದ ಮಹಿಳೆ ಮೃತಪಟ್ಟಿದ್ದಾರೆ.

ಕೆ.ಆರ್.ಪೇಟೆ ತಾಲೂಕಿನ ನಗರೂರು ಗ್ರಾಮದ ನಿವಾಸಿ ಮಂಜುಳಾ (38) ಮೃತಪಟ್ಟವರು. ಹೊಳೆನರಸೀಪುರ ತಾಲೂಕಿನ ರಂಗೇನಹಳ್ಳಿ ಗ್ರಾಮದ ಹೊಂಬಾಳೆಗೌಡ ಅವರ ಮಗಳಾದ ಮಂಜುಳಾ ಅವರನ್ನು ಕೆ.ಆರ್.ಪೇಟೆ ತಾಲೂಕಿನ ನಗರೂರು ಗ್ರಾಮಕ್ಕೆ ವಿವಾಹ ಮಾಡಿಕೊಡಲಾಗಿತ್ತು. ತಾಲೂಕಿನ ಗದ್ದೆ ಹೊಸೂರು ಗ್ರಾಮದಲ್ಲಿರುವ ತಮ್ಮ ಮನೆದೇವರು ಬೀರೇಶ್ವರಸ್ವಾಮಿ ಪೂಜೆ ಮುಗಿಸಿಕೊಂಡು ತವರೂರು ರಂಗೇನಹಳ್ಳಿಗೆ ಅಕ್ಕನ ಗಂಡ ಪುಟ್ಟಣ್ಣ ಅವರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಾಗ ಅಪಘಾತ ಸಂಭವಿಸಿದೆ. ಮಂಜುಳಾ ಮೃತಪಟ್ಟರೆ, ಪುಟ್ಟಣ್ಣ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಮೃತರಿಗೆ ಪತಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಮಗ ಇದ್ದಾನೆ. ಹೊಳೆನರಸೀಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net