ಅವಳಿ ಹೆಣ್ಣು ಮಕ್ಕಳ ತಂದೆ ನಾನಲ್ಲ ಎಂದ ಪತಿ; ನವಜಾತ ಶಿಶುಗಳ ಕತ್ತು ಸೀಳಿ ಕೊಂದ ತಾಯಿ

Twin Babies
Published on

ಶ್ರೀನಗರ: ಪತಿ ಮಕ್ಕಳನ್ನು ನಿರಾಕರಿಸಿದ ಎಂಬ ಕಾರಣಕ್ಕೆ ತಾಯಿಯೊಬ್ಬಳು ಅವಳಿ ಮಕ್ಕಳ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್​ನಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಆಕೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೂಂಚ್​ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯೋಗುಲ್ ಮನ್ಹಾಸ್, ಮಹಿಳೆಯ ಪತಿ ಸೌದಿ ಅರೇಬಿಯಾದಲ್ಲಿ ಕೆಲಸ ಮಡುತ್ತಿದ್ದು, ಮೂರು ತಿಂಗಳ ಹಿಂದೆ ರಜದ ಮೇಲೆ ತವರಿಗೆ ಬಂದಿದ್ದ. ಆತ ಬಂದ ಕೆಲವೇ ದಿನಕ್ಕೆ ಮಹಿಳೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ಆತ ಪೊಲೀಸ್​ ಠಾಣೆಯಲ್ಲಿ ತನ್ನ ಪತ್ನಿ ಅಕ್ರಮ ಸಂಬಂಧದ ಮೂಲಕ ಮಗುವನ್ನು ಹೊಂದಿದ್ದಾಳೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾನೆ. ಆ ಮಕ್ಕಳು ತಂದೆ ನಾನಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ.

ಪತಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ ವಿಚಾರ ತಿಳಿದ ಪತ್ನಿ ಕೂಡಲೇ ನವಜಾತ ಶಿಶುಗಳನ್ನು ಹತ್ತಿರದ ಹೊಲ ಒಂದಕ್ಕೆ ಕರೆದೊಯ್ದು ಕತ್ತು ಸೀಳಿ ಹತ್ಯೆ ಮಾಡಿದ್ದಾಳೆ. ಆರಂಭದಲ್ಲಿ ಮಹಿಳೆಯ ಪತಿ ಮಾಡಿದ್ದಾನೆ ಎಂದು ಶಂಕಿಸಲಾಗಿತ್ತು. ಅನುಮಾನದ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಮಹಿಳೆ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ವಿಚಾರಣೆ ಮುಂದುವರೆದಿದ್ದು, ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯೋಗುಲ್​ ಮನ್ಹಾಸ್​ ತಿಳಿಸಿದ್ದಾರೆ.

JK Murder
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net