ಎಲ್ಲ ಕ್ಷೇತ್ರದಲ್ಲೂ ಮಹಿಳೆಯರು ಯಶಸ್ವಿ

18-ಎಸ್ಕೆಪಿ-2-ಉದ್ಘಾಟನೆ
ಶಿಕಾರಿಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮಹಿಳಾ ವಸತಿ ನಿಲಯವನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು. ಸುಧೀರ್, ವೀರನ ಗೌಡ, ಪ್ರವೀಣ್, ಡಿ.ಜಿ.ರಮೇಶ್ ಇತರರಿದ್ದರು.
Published on

ಶಿಕಾರಿಪುರ: ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ಯಶಸ್ಸು ಸಾಧಿಸುತ್ತಿದ್ದು, ಗ್ರಾಪಂ ಅಧಿಕಾರದಿಂದ ಹಿಡಿದು ದೇಶದ ಪ್ರಥಮ ಪ್ರಜೆವರೆಗಿನ ಸ್ಥಾನಗಳನ್ನು ಅಲಂಕರಿಸಿದ್ದಾರೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಪಟ್ಟಣದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮಹಿಳಾ ನೂತನ ವಸತಿ ನಿಲಯ ಉದ್ಘಾಟಿಸಿ ಮಾತನಾಡಿ, ಮಹಿಳಾ ಅಭ್ಯುದಯವೇ ಕೇಂದ್ರ ಸರ್ಕಾರದ ಉದ್ದೇಶ. ಮಹಿಳೆಯರು, ವಿದ್ಯಾರ್ಥಿನಿಯರಿಗಾಗಿ ಮಹತ್ತರ ಯೋಜನೆಗಳನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸಿದೆ ಎಂದು ತಿಳಿಸಿದರು.

ಮಹಿಳೆಯರು ಸಮರ್ಥವಾಗಿ ಜವಾಬ್ದಾರಿ ನಿಭಾಯಿಸುತ್ತಾರೆ. ಕಠಿಣ ಪರಿಶ್ರಮದಿಂದ ಕೆಲಸ ಮಾಡುವ ಮೂಲಕ ಯಶಸ್ಸಿನ ಹಾದಿಯಲ್ಲಿ ಸಾಗುತ್ತಾರೆ. ಮುಖ್ಯವಾಗಿ ಗುರಿ ಇಟ್ಟುಕೊಂಡು ಕನಸನ್ನು ನನಸು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಕ್ರೀಡಾಪಟುಗಳಿಗೆ, ಕ್ರೀಡಾಸಕ್ತರಿಗೆ ಉಪಯುಕ್ತವಾಗಿರುವ ಸುಸಜ್ಜಿತ ಒಳಾಂಗಣ ಕ್ರೀಡಾಂಗಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ ಒದಗಿಸಬೇಕು ಎಂದರು.

ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್, ಯುವ ಮೋರ್ಚಾ ಅಧ್ಯಕ್ಷ ವೀರನ ಗೌಡ, ಪ್ರವೀಣ್, ಪ್ರಾಚಾರ್ಯ ಡಿ.ಜಿ.ರಮೇಶ್, ಶೇಖರ್, ಉಪನ್ಯಾಸಕ ವಿನಯ್, ಐಕ್ಯೂಎಸ್‌ಸಿ ಸಂಚಾಲಕ ಅಜಯ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net