ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ತಿಂಗಳಲ್ಲಿ 3 ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಸುತ್ತಿದ್ದೇವೆ. ಆಸ್ಪತ್ರೆಯಲ್ಲಿ ಒಂದು ಹಾಗೂ ವೈದ್ಯರ ಅನುಕೂಲತೆ ಇಲ್ಲದ ಹಳ್ಳಿ ಪ್ರದೇಶದಲ್ಲಿ ಎರಡು ಕ್ಯಾಂಪ್‌ಗಳನ್ನು ಆಯೋಜಿಸಲಾಗುತ್ತದೆ. ಇದರಿಂದ ಹಲವಾರು ಜನರ ರೋಗ ಲಕ್ಷಣಗಳನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚಲಾಗಿದೆ ಎಂದರು.