ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ; ಮಹಿಳಾ ಆಯೋಗದಿಂದ ನಟ ದರ್ಶನ್​ಗೆ ನೋಟಿಸ್​

Darshan
Published on

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಟ ದರ್ಶನ್​​ಗೂ ವಿವಾದಕ್ಕೂ ಎಲ್ಲಿಲ್ಲದ ನಂಟು ಎಂದು ಹೇಳಬಹುದಾಗಿದೆ. ಕಾಟೇರ 50ನೇ ದಿನದ ಸಂಭ್ರಮಾಚರಣೆ ಹಾಗೂ ಡಿ ಪರ್ವ 25 ಕಾರ್ಯಕ್ರಮದಲ್ಲಿ ನಟ ದರ್ಶನ್​ ನೀಡಿದ್ದ ಹೇಳಿಕೆಗಳು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಈಗ ನಟ ದರ್ಶನ್​ಗೆ ರಾಜ್ಯ ಮಹಿಳಾ ಆರೋಗ ನೋಟಿಸ್​ ಜಾರಿ ಮಾಡಿದೆ.

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಗೌಡತಿಯರ ಸಂಘ ನೀಡಿದ ದೂರನ್ನು ಆಧರಿಸಿ ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ರಾಜ್ಯ ಮಹಿಳಾ ಆರೋಗವು ಒಂದು ವಾರದೊಳಗೆ ವಿವರಣೆ ನೀಡುವಂತೆ ಜಾರಿ ಮಾಡಲಾಗಿರುವ ನೋಟಿಸ್​ನಲ್ಲಿ ಸೂಚಿಸಲಾಗಿದೆ.

Notice

ಶ್ರೀರಂಗಪಟ್ಟಣದಲ್ಲಿ ನಡೆದ 25ನೇ ವರ್ಷದ ವಾರ್ಷಿಕೋತ್ಸವದ  ಸಾರ್ವಜನಿಕ ಸಭೆಯಲ್ಲಿ ದರ್ಶನ್‌ ಮಹಿಳೆಯರ ಬಗ್ಗೆ  ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಗೌಡತಿಯರ ಸೇನೆ  ಆರೋಪಿಸಿತ್ತು. ಇದನ್ನ ಖಂಡಿಸಿ ಗೌಡತಿಯ ಸೇನೆ ಪ್ರತಿಭಟನೆ ನಡೆಸಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಹೆಣ್ಣಿನ ಬಗ್ಗೆ ಅವಹೇಳನಕಾರಿಯಾಗಿ ದರ್ಶನ್ ಮಾತನಾಡಿದ್ದಾರೆ. ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎಂದು ವೇದಿಕೆಯ ಮೇಲೆಯೇ ಹೇಳಿದ್ದಾರೆ. ಈ ಹೇಳಿಕೆಗೆ ವಿರೋಧಿಸಿ ಒಕ್ಕಲಿಗ ಗೌಡತಿಯರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಹೆಣ್ಣು ಮಕ್ಕಳಿಗೆ ಇದು ಅವಮಾನ ಮಾಡುವಂಥದ್ದು ಎಂದು ಮಹಿಳಾ ಆಗೋಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net