ಸಾಲಿಗ್ರಾಮ: ಕಾರು ಡಿಕ್ಕಿ ಹೊಡೆದು ಬೈಕ್‌ನಲ್ಲಿ ಹೋಗುತ್ತಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ.
ಪಟ್ಟಣದ ರಾಂಪುರ ಬಡಾವಣೆಯ ಸಣ್ಣನಿಂಗನಾಯಕ(50) ಮೃತರು. ಭೇರ್ಯ ಕಡೆಯಿಂದ ಸಾಲಿಗ್ರಾಮದ ಕಡೆಗೆ ಬರುತ್ತಿದ್ದ ಕಾರೊಂದು ಮೂಡಲಬೀಡು ಗೇಟಿನಲ್ಲಿ ಗಾರೆ ಕೆಲಸಕ್ಕೆ ಹೋಗ ನಿಂತಿದ್ದ ಸಣ್ಣನಿಂಗ ನಾಯಕ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಸಾಲಿಗ್ರಾಮ ಸರ್ಕಾರಿ ಆಸ್ಪತ್ರೆ ಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.