ಕಾರ್ಯಕರ್ತರೇ ಬಿಜೆಪಿ ಬೆನ್ನೆಲುಬು

skp man ki baath
ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಬೆಣ್ಣೆ ಪ್ರವೀಣ್, ರಾಘವೇಂದ್ರ, ವೀರನಗೌಡ, ಪವನ್, ರವಿಕಾಂತ್, ವಿನಯ್, ಮಧು ಇತರರಿದ್ದರು.
Published on

ಶಿಕಾರಿಪುರ: ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ರಾಷ್ಟ್ರೀಯ ಪಕ್ಷ ಬಿಜೆಪಿ. ಪಕ್ಷಕ್ಕೆ ಕಾರ್ಯಕರ್ತರೇ ಬೆನ್ನೆಲುಬು ಎಂದು ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಬೆಣ್ಣೆ ಹೇಳಿದರು.

ಶಿಕಾರಿಪುರದ 156 ಬೂತ್‌ನ ಮನೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆ ಕಾರ್ಯಕ್ರಮದ ನಂತರ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ವಿಶ್ವ ಕಂಡ ಶ್ರೇಷ್ಠ ನಾಯಕ ಮೋದಿ. ಅವರು ನಮಗೆಲ್ಲ ನಿತ್ಯಸ್ಪೂರ್ತಿ ಮತ್ತು ಮಾದರಿ ಎಂದರು.
ಸಂಘಟನೆಯೇ ನಮ್ಮ ಪ್ರಮುಖ ಉದ್ದೇಶ. ತಾಲೂಕಿನಲ್ಲಿ ಪಕ್ಷ ಸದೃಢವಾಗಿದೆ. ಆದರೆ ಸದಸ್ಯತ್ವ ಇನ್ನೂ ಹೆಚ್ಚಾಗಬೇಕು. ನಮ್ಮ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ ಹೆಚ್ಚು ಸದಸ್ಯತ್ವ ಮಾಡಿಸಬೇಕು ಎಂದು ತಿಳಿಸಿದರು.
ಬಿಜೆಪಿ ಮಾಜಿ ನಗರಾಧ್ಯಕ್ಷ ರಾಘವೇಂದ್ರ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೀರನ ಗೌಡ, ಪವನ್ ಮಡ್ಡಿ, ರವಿಕಾಂತ್, ವಿನಯ್, ಮಧು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net