31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ

minister santhosh lad
ಕಾರ್ಮಿಕ ಸಚಿವ ಸಂತೋಷ್ ಲಾಡ್
Published on

ಬೆಂಗಳೂರು: ಕಟ್ಟಡ ಕಾರ್ಮಿಕರಿಂದ ಸಂಗ್ರಹಿಸುವ ಸೆಸ್ ಹಣವನ್ನು ಅವರ ಕ್ಷೇಮಾಭಿವೃದ್ಧಿಗೆ ಬಳಸಬೇಕೆಂದು ಕಾಯ್ದೆಯಲ್ಲಿ ಷರತ್ತು ಇದೆ. ಆದರಿಂದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ ತೆರೆಯುವುದಾಗಿ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ.

ಪರಿಷತ್‌ನಲ್ಲಿ ಪ್ರತಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಸದಸ್ಯರಾದ ಕೆ.ಎಸ್. ನವೀನ್, ಡಿ.ಎಸ್. ಅರುಣ್ ಕಟ್ಟಡ ಕಾರ್ಮಿಕರ ಮಕ್ಕಳಿಗೆ 750 ಕೋಟಿ ರೂ. ವೆಚ್ಚದಲ್ಲಿ ಪ್ರತ್ಯೇಕ ವಸತಿ ಶಾಲೆ ನಿರ್ಮಾಣ ಅಗತ್ಯವಿಲ್ಲ. ಈಗಾಗಲೇ ಇರುವ ಸರ್ಕಾರಿ ಶಾಲಾ, ಕಾಲೇಜು ಮತ್ತು ವಸತಿ ಶಾಲೆಗಳಿಗೆ ವರ್ಗಾವಣೆ ಮಾಡಿ ಕಾರ್ಮಿಕರ ಮಕ್ಕಳಿಗೆ ವಿಶೇಷ ಸವಲತ್ತು ಒದಗಿಸಬೇಕೆಂದು ಸರ್ಕಾರಕ್ಕೆ ಒತ್ತಾಯ ಮಾಡಿದರು. ಇದಕ್ಕೆ ಉತ್ತರಿಸಿದ ಸಂತೋಷ್ ಲಾಡ್, ಕಟ್ಟಡ ಕಾರ್ಮಿಕರಿಂದ ಸೆಸ್ ರೂಪದಲ್ಲಿ ವಸೂಲಿ ಮಾಡುವ ಹಣವನ್ನು ಅವರ ಕ್ಷೇಮಾಭಿವೃದ್ಧಿಗೆ ಬಳಸಬೇಕೆಂದು ಕೇಂದ್ರ ಸರ್ಕಾರ ಷರತ್ತು ವಿಧಿಸಿದೆ.

ಆದರಿಂದ 31ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ ಸ್ಥಾಪಿಸಲು 750 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. 6ನೇ ತರಗತಿಯಿಂದ 12ರ ವರೆಗೆ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇದಕ್ಕಾಗಿ ಮೀಸಲಿಟ್ಟ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net