ಬಿಡಿಎ ಮತ್ತು ಬಿಬಿಎಂಪಿಯ ಕೆಲಸ ಸತ್ಯಾಸತ್ಯತೆ ತಿಳಿಯಲು ತನಿಖೆ: ಸಿಎಂ

Siddaramaiah
Published on

ಬೆಂಗಳೂರು:

ಬಿಡಿಎ ಮತ್ತು ಬಿಬಿಎಂಪಿಯಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿರುವುದು ನನಗೆ ತಿಳಿದಿಲ್ಲ. ಬದಲಿಗೆ ತನಿಖೆ ಆಗಬೇಕು ಎಂದು ಆಗ್ರಹಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂದರು.

ಉಡುಪಿ ಪ್ರಕರಣ ಸಿಐಡಿಗೆ

ಉಡುಪಿ ವೀಡಿಯೋ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು ನಿನ್ನೆ ಆದೇಶವಾಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು. ಆದರೆ ಇನ್ನೂ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಸಿಐಡಿ ಗೆ ವಹಿಸಲಾಗಿದೆ ಎಂದರು.

ಶಾಸಕ ಯಶ್‌ಪಾಲ್ ಸುವರ್ಣ ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಐಡಿಗೆ ಕೊಟ್ಟರೂ ಬೇಡ ಎನ್ನುತ್ತಾರೆ. ಅವರ ಕಾಲದಲ್ಲಿ ಸಿಐಡಿಗೆ ಕೊಟ್ಟಿದ್ದ ಪ್ರಕರಣಗಳು ಮುಚ್ಚಿಹೋಗಿವೆಯೇ? ಎಂದು ಕೇಳಿದರು.

ತನಿಖೆಗೆ ಸೂಚನೆ

ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ ಈ ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net