ನಿರೀಕ್ಷೆಯಂತೆ ಉತ್ತಮ ಕೆಲಸ ಮಾಡುವೆ

skp bjp
ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಕೆ.ಎಸ್.ಗುರುಮೂರ್ತಿ, ರಾಮಾನಾಯಕ್, ವಸಂತ ಗೌಡ ಇತರರಿದ್ದರು.
Published on

ಶಿಕಾರಿಪುರ: ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತವರು ಕ್ಷೇತ್ರ ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರು ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ನೇತೃತ್ವದಲ್ಲಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಶ್ರೀ ಹುಚ್ಚರಾಯಸ್ವಾಮಿ, ತೊಗರ್ಸಿ ಶ್ರೀ ಮಲ್ಲಿಕಾರ್ಜುನ ದೇವಾಲಯ ಸೇರಿ ತಾಲೂಕಿನ ಹಲವು ದೇವಾಲಯಗಳಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಮತದಾರರಿಗೆ ನಾನು ಚಿರಋಣಿ. ನನ್ನ ಗೆಲುವಿಗೆ ಜಿಲ್ಲೆಯ ಮತದಾರರು, ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಕಾರಣ. ಈ ಬಾರಿಯೂ ಜನರ ನಿರೀಕ್ಷೆಯಂತೆ ಉತ್ತಮವಾಗಿ ಕೆಲಸ ಮಾಡುತ್ತೇನೆ. ಅಭಿವೃದ್ಧಿಯೇ ನನ್ನ ಗುರಿ. ಜನಸೇವೆಯೇ ನನ್ನ ಸಂಕಲ್ಪ. ಅಧಿಕಾರವನ್ನು ಸದ್ಬಳಕೆ ಮಾಡಿಕೊಂಡು ಜನಹಿತ ಕಾರ್ಯ ಮಾಡುತ್ತೇನೆ . ಕಳೆದ ಬಾರಿಗಿಂತ ಈ ಬಾರಿ ನನ್ನ ಜವಾಬ್ದಾರಿ ಹೆಚ್ಚಾಗಿದೆ ಎಂದು ತಿಳಿಸಿದರು.
ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಮಾತನಾಡಿ, ರಾಘವೇಂದ್ರ ಅವರ ಜನಪರ ಕಾಳಜಿ, ನಿರಂತರ ಪರಿಶ್ರಮ ಮತ್ತು ಅಭಿವೃದ್ಧಿ ಕಾರ್ಯಗಳು ಅವರನ್ನು ಅಧಿಕ ಮತಗಳಿಂದ ಗೆಲ್ಲುವಂತೆ ಮಾಡಿದೆ. ಇದು ಮತದಾರರ ಗೆಲುವು ಎಂದರು. ಪ್ರಮುಖರಾದ ರಾಮಾನಾಯಕ್, ವಸಂತಗೌಡ ಸೇರಿ ಬಿಜೆಪಿ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net