ಬಂದರಿನ ಪರಿಸರ ಸುಸ್ಥಿರತೆ ಮತ್ತು ಹಸಿರು ಉಪಕ್ರಮಗಳ ಬದ್ಧತೆಯನ್ನು ಪುನರುಚ್ಚರಿಸುವ ಭಾಗವಾಗಿ ಬಂದರು ಆವರಣದಲ್ಲಿ ಬೃಹತ್ ಗಿಡ ನೆಡುವ ಅಭಿಯಾನವನ್ನು ಆಯೋಜಿಸಲಾಗಿತ್ತು. ಎನ್‌ಎಂಪಿಎ ಉಪಾಧ್ಯಕ್ಷರಾದ ಎಸ್. ಶಾಂತಿ ಅವರು ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು. ಮುಖ್ಯ ವಿಜಿಲೆನ್ಸ್ ಅಧಿಕಾರಿ ಪದ್ಮನಾಭಾಚಾರ್ ಕೆ. ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ಅವರು ಉಪಸ್ಥಿತರಿದರು.