ಎಲ್ಲರೂ ಪರಿಸರ ಕಾಳಜಿ ಬೆಳೆಸಿಕೊಳ್ಳಿ

kdr parisara
ಕಡೂರಿನ ಹರುವನಹಳ್ಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಗಿಡ ನೆಡುವ ಕಾರ್ಯಕ್ಕೆ ತಾಪಂ ಇಒ ಸಿ.ಆರ್.ಪ್ರವೀಣ್ ಚಾಲನೆ ನೀಡಿದರು. ಕಲ್ಲಪ್ಪ, ಎ.ಆರ್.ಪ್ರಮೀಳಾ, ಬಿಂದುಶ್ರೀ, ರಘುರಾಮ್, ಸುನೀಲ್ ಇತರರಿದ್ದರು.
Published on

ಕಡೂರು: ಪರಿಸರ ಸಂರಕ್ಷಣೆ ಮಾಡುವ ಆಶಯ ಪ್ರತಿಯೊಬ್ಬರಲ್ಲೂ ಇದ್ದಾಗ ಮಾತ್ರ ಪರಿಸರ ಉಳಿಯಲು ಸಾಧ್ಯ ಎಂದು ತಾಪಂ ಇಒ ಸಿ.ಆರ್.ಪ್ರವೀಣ್ ತಿಳಿಸಿದರು.
ಹರುವನಹಳ್ಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಮಂಗಳವಾರ ತಂಗಲಿ ಗ್ರಾಪಂ, ಅರಣ್ಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ತೀವ್ರ ಬಿಸಿಲಿನಿಂದ ಸಂಕಷ್ಟ ಎದುರಿಸುತ್ತಿದ್ದೇವೆ. ಪರಿಸರ ಸಂರಕ್ಷಣೆಯೇ ಎಲ್ಲದಕ್ಕೂ ಪರಿಹಾರ ಎಂದರು.
ಸಾಮಾಜಿಕ ವಲಯ ಅರಣ್ಯಾಧಿಕಾರಿ ಎ.ಆರ್.ಪ್ರಮೀಳಾ ಮಾತನಾಡಿ, ಇಲಾಖೆಯಿಂದ ನರ್ಸರಿಯಲ್ಲಿ ವಿವಿಧ ತಳಿಗಳ ಸಸಿಗಳನ್ನು ಬೆಳೆಸಲಾಗಿದೆ. ರಿಯಾಯಿತಿ ದರದಲ್ಲಿ ಸಸಿಗಳನ್ನು ವಿತರಿಸಲಾಗುವುದು. ರೈತರು ಜಮೀನು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಸಿಗಳನ್ನು ನೆಟ್ಟು ಇಲಾಖೆಯ ಪ್ರೋತ್ಸಾಹಧನ ಪಡೆಯಬಹುದು ಎಂದರು.
ನರೇಗಾ ಸಹಾಯಕ ನಿರ್ದೇಶಕ ಕಲ್ಪಪ್ಪ, ತಂಗಲಿ ಗ್ರಾಪಂ ಅಧ್ಯಕ್ಷ ರಘುರಾಮ್, ಪಿಡಿಒ ಸುನೀಲ್, ಪ್ರಾಧ್ಯಾಪಕಿ ಬಿಂದುಶ್ರೀ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net