ವಿಶ್ವ ರೇಬಿಸ್ ದಿನಾಚರಣೆ ಕಾರ್ಯಕ್ರಮ

16BTP01
ಬೆಟ್ಟದಪುರ ಸಮೀಪದ ಬೆಟ್ಟದತುಂಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ವಿಶ್ವ ರೇಬಿಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕ ಎಚ್.ಎಸ್.ರವಿ ಮಾತನಾಡಿದರು. ಮಮತಾ, ಶಾಂತಮ್ಮ, ಸುಮಾ ಇತರರಿದ್ದರು.
Published on

ಬೆಟ್ಟದಪುರ: ಇಲ್ಲಿಗೆ ಸಮೀಪದ ಬೆಟ್ಟದತುಂಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ವಿಶ್ವ ರೇಬಿಸ್ ದಿನವನ್ನು ಆಚರಣೆ ಮಾಡಲಾಯಿತು.

ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎ. ರವಿ ಮಾತನಾಡಿ, ರೇಬೀಸ್ ರೋಗವು ವೈರಸ್‌ನಿಂದ ಉಂಟಾಗುವ ಕಾಯಿಲೆಯಾಗಿದೆ. ಶೇ.90 ಭಾಗ ನಾಯಿ ಕಡಿತದಿಂದ ಬಂದರೆ, ಉಳಿದ ಶೇ.10 ಭಾಗ ಆಡು, ಕುದುರೆ, ಕತ್ತೆ, ಕುರಿ, ಬೆಕ್ಕುಗಳ ಕಡಿತದಿಂದ ಬರುವ ಸಾಧ್ಯತೆ ಇದೆ. ಯಾವುದೇ ಸಾಕು ಪ್ರಾಣಿಗಳಿದ್ದರೂ ಅವುಗಳಿಗೆ ಕಡ್ಡಾಯವಾಗಿ ರೇಬಿಸ್ ಲಸಿಕೆಯನ್ನು ಹಾಕಿಸಬೇಕು. ರೇಬಿಸ್ ಸಂಬಂಧ ಯಾವುದೇ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು. ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಮಮತಾ, ಆಶಾ ಕಾರ್ಯಕರ್ತೆ ಶಾಂತಮ್ಮ, ಸುಮಾ, ವಸಂತ್ ಕುಮಾರ್ ಸೇರಿದಂತೆ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net