21ರಂದು ಎನ್‌ಇಎಸ್ ಮೈದಾನದಲ್ಲಿ ವಿಶ್ವ ಯೋಗ ದಿನ

dharmastala sanga
ಡಾ. ಪ್ರಶಾಂತ್ ಶೆಟ್ಟಿ
Published on

ಶಿವಮೊಗ್ಗ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್, ಶಿವಮೊಗ್ಗದ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಧರ್ಮಸ್ಥಳದ ಧರ್ಮದರ್ಶಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ 9ನೇ ವಿಶ್ವ ಯೋಗ ದಿನವನ್ನು ಜೂ.21ರಂದು ಬೆಳಗ್ಗೆ 6.30ಕ್ಕೆ ಎನ್‌ಇಎಸ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಸೇರಿದಂತೆ ಎರಡೂವರೆ ಸಾವಿರ ಶಿಬಿರಾರ್ಥಿಗಳಿಗೆ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಡುವರು ಎಂದು ವಿಶ್ವ ಯೋಗ ದಿನಾಚರಣೆ ರಾಷ್ಟ್ರೀಯ ಸಮಿತಿ ಸದಸ್ಯ, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಪ್ರಾಚಾರ್ಯ ಡಾ. ಪ್ರಶಾಂತ್ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಯೋಗ ದಿನಾಚರಣೆ ಹಮ್ಮಿಕೊಂಡಿದ್ದು ಬೆಳಗ್ಗೆ 6.30ರಿಂದ 7.30ರವರೆಗೆ ಯೋಗಾಭ್ಯಾಸ ನಡೆಯಲಿದೆ. 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಆಶೀವರ್ಚನ ನೀಡುವರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮುಖ್ಯ ಅತಿಥಿಯಾಗಿರುವರು ಎಂದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ‌್ಯಾನಾಯ್ಕಾ, ಎಂಎಲ್‌ಸಿಗಳಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಗೌರವ ಉಪಸ್ಥಿತಿ ಇರಲಿದ್ದು ಡಿಸಿ ಡಾ. ಆರ್.ಸೆಲ್ವಮಣಿ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಎಸ್.ಸತೀಶ್ಚಂದ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿಇಒ ಡಾ. ಎಲ್.ಎಚ್.ಮಂಜುನಾಥ್, ಎನ್‌ಇಎಸ್ ಅಧ್ಯಕ್ಷ ನಾರಾಯಣರಾವ್ ಉಪಸ್ಥಿತರಿರುವರು ಎಂದು ಹೇಳಿದರು.
ಶಿವಮೊಗ್ಗದ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಜೆ.ಚಂದ್ರಶೇಖರ್, ಪ್ರಮುಖರಾದ ಯಶೋಧರ ಹೆಗಡೆ, ಪದ್ಮಾಂಭಾ, ಯೋಗ ಶಿಕ್ಷಕಿ ಶಾಂತಾ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net