

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಪ್ರಯಾಣಿಕರ ವಿಮಾನ A380 ನಾಳೆ (ಅ.14) ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ.
ಎಮಿರೆಟ್ಸ್ ಏರ್ಲೈನ್ಸ್ನ ಈ ವಿಮಾನ, ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶುಕ್ರವಾರ ಬೆಳಗ್ಗೆ 10ಕ್ಕೆ ಹೊರಟು ಮಧ್ಯಾಹ್ನ 3.40ಕ್ಕೆ ಬೆಂಗಳೂರಿನಲ್ಲಿ ಲ್ಯಾಂಡ್ ಆಗಲಿದೆ.
‘ಈ ಐತಿಹಾಸಿಕ ಕ್ಷಣಕ್ಕೆ ನಾವು ಸಜ್ಜಾಗಿದ್ದೇವೆ. ನಮ್ಮ ಇಂಜಿನಿಯರ್ಗಳು ಎಲ್ಲ ರೀತಿಯ ಪ್ರಕ್ರಿಯೆಗಳಿಗೂ ಸಿದ್ಧರಾಗಿದ್ದಾರೆ' ಎಂದು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಇದೊಂದು ಜಂಬೋ ಜೆಟ್ ವಿಮಾನ. ಡಬಲ್ ಡೆಕ್ಕರ್ ವಿಮಾನ ಆಗಿರುವ ಇದು 500ಕ್ಕಿಂತಲೂ ಹೆಚ್ಚಿನ ಜನರನ್ನು ಹೊರುವ ಸಾಮರ್ಥ್ಯ ಹೊಂದಿದೆ.