ಪ್ರಮುಖ ದೇವಸ್ಥಾನಗಳ ಪೂಜೆ ಇನ್ನು ಫೇಸ್‌ಬುಕ್ ಲೈವ್‌ನಲ್ಲಿ ಲಭ್ಯ!

facebook
Published on

ಬೆಂಗಳೂರು: ರಾಜ್ಯದ ಕೆಲವು ಆಯ್ದ ಪ್ರಮುಖ ದೇವಸ್ಥಾನಗಳ ಪೂಜೆ ಪುನಸ್ಕಾರವನ್ನು ಆನ್‌ಲೈನ್‌ನಲ್ಲಿ ನೇರ ಪ್ರಸಾರ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಆರಂಭದಲ್ಲಿ 15 ಜಿಲ್ಲೆಗಳ ದೇಗುಲ ಪೂಜೆಯನ್ನು ಆಯಾ ದೇವಸ್ಥಾನಗಳ ವೆಬ್‌ಸೈಟ್‌ನಲ್ಲಿ ಮತ್ತು ಫೇಸ್‌ಬುಕ್ ಲೈವ್ ಮೂಲಕ ನೇರ ಪ್ರಸಾರ ಮಾಡುವ ಚಿಂತನೆ ಇದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ದೇವಸ್ಥಾನಗಳನ್ನು ಸಾರ್ವಜನಿಕರಿಗೆ ಈಗಲೇ ಮುಕ್ತಗೊಳಿಸಲು ಸಾಧ್ಯವಿಲ್ಲ. ಆದರೆ ದೇವಸ್ಥಾನದಲ್ಲಿ ನಡೆಯುವ ಪೂಜೆಯನ್ನು ನಿತ್ಯವೂ ಭಕ್ತರು ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಈಗಾಗಲೇ ಹಲವು ದೇವಸ್ಥಾನಗಳು ತಮ್ಮ ಬೆಳಗಿನ ಪೂಜೆ, ಮಂಗಳಾರತಿಯನ್ನು ಟ್ವಿಟರ್, ಫೇಸ್‌ಬುಕ್ ಮತ್ತು ತಮ್ಮ ಸ್ವಂತ ವೆಬ್‌ಸೈಟ್‌ಗಳಲ್ಲಿ ಬಿತ್ತರಿಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net