ಬೀದರ್: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಇಲ್ಲಿಯ ಅಂಬೇಡ್ಕರ್ ವೃತ್ತ ಸಮೀಪದ ಅಕ್ಷರ ಪುಸ್ತಕ ಮನೆಯಲ್ಲಿ ನವೆಂಬರ್ 14 ರಂದು ಸಂಜೆ 4ಕ್ಕೆ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.
ಬೀದರ್ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಎಸ್. ಬಿರಾದಾರ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸುವರು.
ಕಲಬುರಗಿಯ ಶ್ರೀ ಸಿದ್ಧಲಿಂಗೇಶ್ವರ ಬುಕ್ ಡಿಪೊ ಮಾಲೀಕ ಬಸವರಾಜ ಕೊನೇಕ್, ಬೀದರ್ ವಿಶ್ವವಿದ್ಯಾಲಯದ ಕುಲಸಚಿವ ಡಾ. ರವಿಂದ್ರಕುಮಾರ ಗಬಾಡಿ, ಗಾಂಧಿಗಂಜ್ ಸಹಕಾರ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ, ಕರ್ನಾಟಕ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯೆ ಡಾ. ಜಯಶ್ರೀ ಪ್ರಭಾ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಚಾರ್ಯ ಪ್ರೊ. ಮನೋಜಕುಮಾರ, ಉದ್ಯಮಿ, ಡಿ.ಆರ್. ಗಣಾಚಾರಿ ಉಪಸ್ಥಿತರಿರುವರು ಎಂದು ಅಕ್ಷರ ಮನೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಬಂಡಯ್ಯ ಸ್ವಾಮಿ ತಿಳಿಸಿದ್ದಾರೆ.