ಕ್ರಿಮಿನಲ್ ಮಾನನಷ್ಟ ಪ್ರಕರಣ ಭಜರಂಗ್‌ಗೆ ಜಾಮೀನು ನೀಡಿದ ದೆಹಲಿ ಕೋರ್ಟ್

New-Project-10
Published on

ನವದೆಹಲಿ: ಭಾರತದ ಅಗ್ರ ಕುಸ್ತಿಪಟು ಭಜರಂಗ್ ಪೂನಿಯಾಗೆ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ. ಕುಸ್ತಿ ೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರತಿಭಟನೆಯ ವೇಳೆ ತನ್ನ ವಿರುದ್ಧ ಹೇಳಿಕೆಯಿಂದ ಮಾನನಷ್ಟ ಮಾಡಿದ್ದಾರೆ ಎಂದು ಆರೋಪಿಸಿ ಕುಸ್ತಿ ಕೋಚ್ ನರೇಶ್ ದಹಿಯಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಕುಸ್ತಿಪಟುಗಳ ಪ್ರತಿಭಟನೆಯ ಸಂದರ್ಭದಲ್ಲಿ, ಅತ್ಯಾಚಾರ ಆರೋಪವನ್ನು ಎದುರಿಸುತ್ತಿರುವ ದಹಿಯಾಗೆ ಪ್ರತಿಭಟನೆಯನ್ನು ವಿರೋಧಿಸುವ ಯಾವುದೇ ನೈತಿಕ ಹಕ್ಕು ಇಲ್ಲ ಎಂದು ಭಜರಂಗ್ ಹೇಳಿಕೆ ನೀಡಿದ್ದರು. ಅತ್ಯಾಚಾರ ಪ್ರಕರಣದಲ್ಲಿ ತಾನು ದೋಷಮುಕ್ತನಾಗಿದ್ದು, ಭಜರಂಗ್ ಹೇಳಿಕೆ ತನಗೆ ಕೆಟ್ಟ ಹೆಸರು ತಂದಿದೆ ಎಂದು ದಹಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು. ಮೊದಲ ಮೂರು ವಿಚಾರಣೆಗಳಿಂದ ತಪ್ಪಿಸಿಕೊಂಡಿದ್ದ ಭಜರಂಗ್ ಗುರುವಾರ ನ್ಯಾಯಾಲಯದ ಎದುರು ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ. ಮುಂದಿನ ವಿಚಾರಣೆಯ ದಿನಾಂಕವನ್ನು ಮಾರ್ಚ್ 5ಕ್ಕೆ ಮುಂದೂಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net