ಕುಸ್ತಿ ಆಡಲು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ

7-RNR-06
Published on

ರಾಣೆಬೆನ್ನೂರ: ಇತ್ತೀಚೆಗೆ ಕಾರವಾರದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜ್ ವಿಭಾಗದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಇಲ್ಲಿಯ ಆರ್‌ಟಿಇಎಸ್ ಪದವಿಪೂರ್ವ ಕಾಲೇಜ್‌ನ ವಿದ್ಯಾರ್ಥಿ ಪವನಕುಮಾರ ಕಂಬಳಿ 97 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.
ಈತ ನಗರದ ಕುರುಬಗೇರಿಯ ಶ್ರೀ ಬೀರಲಿಂಗೇಶ್ವರ ಗರಡಿ ಮನೆಯಲ್ಲಿ ತರಬೇತಿ ಪಡೆದಿದ್ದಾನೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net