ಕಾನ್‌ಸ್ಟೆಬಲ್ ನೇಮಕಾತಿಗೆ ನ.5ಕ್ಕೆ ಲಿಖಿತ ಪರೀಕ್ಷೆ

Police Computer
Published on

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನವೆಂಬರ್ 5ಕ್ಕೆ ಲಿಖಿತ ಪರೀಕ್ಷೆ ನಿಗದಿ ಮಾಡಿ ಪೊಲೀಸ್ ಇಲಾಖೆ ಆದೇಶಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶದ ಕಾನ್‌ಸ್ಟೆಬಲ್(ಸಿವಿಲ್) ಮತ್ತು ಸೇವಾನಿರತ ಆ್ಯಂಡ್ ಬ್ಯಾಕ್‌ಲಾಗ್ 454 ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬೆಳಗ್ಗೆ 11 ರಿಂದ ಮಧ್ಯಾಹ್ನ 12.30ರ ವರೆಗೆ ನಡೆಯಲಿದೆ.

ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ ನಗರ, ಕಲಬುರಗಿ ಜಿಲ್ಲೆ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಆದರಿಂದ ಅರ್ಹ ಅಭ್ಯರ್ಥಿಗಳು ಕರೆಪತ್ರದ ಬಗ್ಗೆ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ. ಅದರಲ್ಲಿ ಕರೆಪತ್ರದ ಲಿಂಕ್ ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net