ಯದುವೀರ್ ದ್ವಿತೀಯ ಪುತ್ರನಿಗೆ ಯುಗಾಧ್ಯಕ್ಷ ಕೃಷ್ಣರಾಜ ಒಡೆಯರ್ ಎಂದು ನಾಮಕರಣ

32
Published on

ರಾಜವಂಶಸ್ಥರು ಆದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ದ್ವಿತೀಯ ಪುತ್ರನಿಗೆ ಯುಗಾಧ್ಯಕ್ಷ ಕೃಷ್ಣರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.

ಅರಮನೆಯ ಕನ್ನಡಿತೊಟ್ಟಿಯಲ್ಲಿ ಸೋಮವಾರ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ಸಮ್ಮುಖದಲ್ಲಿ ನಡೆದ ನಾಮಕರಣ ಕಾರ್ಯಕ್ರಮ ನೆರವೇರಿದೆ.

ಗುರು, ಹಿರಿಯರು ಸೂಚಿಸಿದ್ದಂತೆ ಎರಡನೇ ಪುತ್ರನಿಗೆ ಯುಗಾಧ್ಯಕ್ಷ ಕೃಷ್ಣರಾಜ ಒಡೆರ್ ಎಂದು ಕಿವಿಯಲ್ಲಿ ಮೂರು ಬಾರಿ ಹೇಳುವ ಮೂಲಕ ಅಧಿಕೃತವಾಗಿ ನಾಮಕರಣ ಮಾಡಲಾಯಿತು.

ಮೊದಲ ಪುತ್ರನಿಗೆ ಆದ್ಯವೀರ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ. ಇದು ಖಾಸಗಿ ಕಾರ್ಯಕ್ರಮವಾಗಿದ್ದು, ಕೆಲವೇ ಕೆಲವು ಮಂದಿ ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net