ಕೋರ್ಟ್ ಮೆಟ್ಟಿಲೇರಿದ ಯಶ್, ರಾಧಿಕಾ ಪಂಡಿತ್! Yash And Radhika Pandit

Yash
Published on

Yash And Radhika Pandit : ನಟಿ ರಾಧಿಕಾ ಪಂಡಿತ್ ಅವರು ಕೋರ್ಟ್​ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್​ ಜೋರಾಗಿ ವಾದ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಇದೇನು ಹೊಸ ಸುದ್ದಿ ಎಂದು ಕಾಮೆಂಟ್​​ ಮಾಡಿದ್ದಾರೆ.

ಯಶ್​ ಮತ್ತು ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಜಾಹೀರಾತನ್ನು ಹಂಚಿಕೊಂಡಿದ್ದಾರೆ. ಈ ಜಾಹೀರಾತಿಗಾಗಿ ಜೋಡಿ ಕೋರ್ಟ್​ ಮೆಟ್ಟಿಲೇರಿದ್ದಾರೆ.

ರಾಧಿಕಾ ಪಂಡಿತ್ ಅವರು ಮೋಸಕ್ಕೆ ಒಳಗಾದ ಗ್ರಾಹಕಿಯ ಪಾತ್ರ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಬಂದ ಲಾಯರ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಕಂಪನಿಯ ನಿಜವಾದ ಅಡುಗೆ ಎಣ್ಣೆ ಯಾವುದು ಎಂಬುದನ್ನು ಸಾಬೀತು ಮಾಡಲು ಯಶ್​ ಬಿರುಸಿನಿಂದ ವಾದ ಮಾಡಿದ್ದಾರೆ. ಈ ರೀತಿಯ ದೃಶ್ಯ ಜಾಹೀರಾತಿನಲ್ಲಿ ಇದೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ.

ರಾಧಿಕಾ ಪಂಡಿತ್ ಅವರು ಕನ್ನಡ ಚಿತ್ರರಂಗದ ಸ್ಟಾರ್​ ನಟಿ. ಆದರೆ ಅವರು ಮದುವೆ ಬಳಿಕ ಸಿನಿಮಾದಲ್ಲಿ ನಟಿಸುವುದು ಕಡಿಮೆ ಆಯಿತು.   ಜಾಹೀರಾತುಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net