ಯಶೋಧಾ ನಕ್ಷತ್ರಿ ಆಯ್ಕೆ

yashodha
Published on

ಕೋಟ: ಪಂಚವರ್ಣ ಯುವಕ ಮಂಡಲ ಕೋಟ, ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಸಹಯೋಗದೊಂದಿಗೆ ನಡೆಯುವ ‘ರೈತರೆಡೆಗೆ ನಮ್ಮ ನಡಿಗೆ’ ಮಾಲಿಕೆಯ 36ರ ಸನ್ಮಾನ ಕಾರ್ಯಕ್ರಮಕ್ಕೆ ಸಾಲಿಗ್ರಾಮ ಪಾರಂಪಳ್ಳಿಯ ಕೃಷಿ ಸಾಧಕಿ ಯಶೋಧಾ ನಕ್ಷತ್ರಿ ಆಯ್ಕೆಯಾಗಿದ್ದಾರೆ. ಅವರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರ ನೀಡಿ ಗೌರವಿಸುವ ಕಾರ್ಯ ಜೂನ್ 22ರಂದು ಸಂಜೆ 4.30ಕ್ಕೆ ನಡೆಯಲಿದೆ ಎಂದು ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net