‘ಟಾಕ್ಸಿಕ್​’ ಬಿಡುಗಡೆ ದಿನಾಂಕ ಘೋಷಣೆ; ಹೊಸ ಪೋಸ್ಟರ್​​ ರಿಲೀಸ್​​.. ಚಿತ್ರತಂಡ ಹೇಳಿದಿಷ್ಟು | Toxic

Untitled design (45)
Published on

ಬೆಂಗಳೂರು: ಬ್ಲಾಕ್‌ಬಸ್ಟರ್ ಕೆಜಿಎಫ್ ಸರಣಿಯ ಮೂಲಕ ಪ್ಯಾನ್​ ಇಂಡಿಯಾ ಸ್ಟಾರ್​​​​ ಆದ ಯಶ್ ಅವರ ಮುಂದಿನ ಸಿನಿಮಾಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಯಶ್​ ಅಭಿನಯದ ಮುಂದಿನ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನಪ್ಸ್'(Toxic) ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ.

ಗೀತು ಮೋಹನ್‌ದಾಸ್‌ ನಿರ್ದೇಶನದ ಟಾಕ್ಸಿಕ್​ ಸಿನಿಮಾ ಸದ್ಯ ಚಿತ್ರೀಕರಣ ಹಂತದಲ್ಲಿದೆ. ಈ ಹಿಂದೆ ಟಾಕ್ಸಿಕ್​​ ಸಿನಿಮಾ 2025ರ ಏಪ್ರಿಲ್‌ 10ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿತ್ತು. ಆದರೆ ಇದೀಗ ಚಿತ್ರ ಬಿಡುಗಡೆಯನ್ನು 1 ವರ್ಷ ಮುಂದೂಡಲ್ಪಟ್ಟಿದೆ. ಸಿನಿಮಾದ ಹೊಸ ಪೋಸ್ಟ್​ರ್​​ ರಿಲೀಸ್​ ಮಾಡಿರುವ ತಯಾರಕರು 2026 ಮಾರ್ಚ್​​ 19ರಂದು ಚಿತ್ರವು ಬಿಡುಗಡೆಯಾಗಲಿದೆ ಎಂದು ಶನಿವಾರ(ಮಾರ್ಚ್​​ 22) ತಿಳಿಸಿದ್ದಾರೆ.

‘ಟಾಕ್ಸಿಕ್’ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣವಾಗುತ್ತಿರುವ ಭಾರತದಲ್ಲಿ ಮೊದಲ ಚಿತ್ರವಾಗಿದೆ. ಚಿತ್ರವನ್ನು ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಹಲವಾರು ಇತರ ಭಾಷೆಗಳಲ್ಲಿ ಡಬ್ ಮಾಡಲಾಗುವುದು ಎಂದು ಹೇಳಲಾಗಿದೆ. 2024ರ ಆಗಸ್ಟ್‌ನಲ್ಲಿ ಟಾಕ್ಸಿಕ್​ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು. ಎರಡು ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣ ನಡೆಯುತ್ತಿರುವ ಕಾರಣ ತಯಾರಿ ಹಾಗೂ ಶೂಟಿಂಗ್‌ ದಿನಗಳು ಹೆಚ್ಚಾಗುತ್ತಿವೆ ಎಂದಿದೆ ಚಿತ್ರತಂಡ. ಇದು ಸಿನಿಮಾ ತಡವಾಗಿ ಬಿಡುಗಡೆಯಾಗಲು ಕಾರಣ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net