ಯಶವಂತ ಸರದೇಶಪಾಂಡೆ ಅಂತ್ಯಕ್ರಿಯೆ

yashwanth saradeshpande
Published on

ಬೆಂಗಳೂರು: ರಂಗ ಕಲಾವಿದ ಯಶವಂತ ಸರದೇಶಪಾಂಡೆ ಅವರ ಅಂತ್ಯಕ್ರಿಯೆ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಚಾಮರಾಜಪೇಟೆಯ ಟಿ.ಆರ್.ಮಿಲ್‌ನ ಚಿತಾಗಾರದಲ್ಲಿ ಮಂಗಳವಾರ ನೆರವೇರಿಸಲಾಯಿತು. ಅವರ ಸಹೋದರ  ಅಗ್ನಿಸ್ಪರ್ಶ ಮಾಡುವ ಅಂತಿಮ ವಿಧಿವಿಧಾನ ನಡೆಯಿತು. ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಸರದೇಶಪಾಂಡೆ ನಿಧನರಾಗಿದ್ದರು. ಮಂಗಳವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ರಂಗಭೂಮಿ ಕಲಾವಿದರಾದ ಮುಖ್ಯಮಂತ್ರಿ ಚಂದ್ರು, ಬಿ.ವಿ. ರಾಜಾರಾಂ, ಶ್ರೀನಿವಾಸ ಜಿ. ಕಪ್ಪಣ್ಣ, ಮಂಡ್ಯ ರಮೇಶ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಸೇರಿ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net