ಯತೀಂದ್ರ ಹೇಳಿಕೆ ಬಗ್ಗೆ ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡುವೆ: DK ಶಿವಕುಮಾರ್

Bbau (53)
Published on

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಉತ್ತರಾಧಿಕಾರಿ ಕುರಿತು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿರುವುದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಹಾಗೂ ಬನ್ನೇರುಘಟ್ಟ ರಸ್ತೆಯಲ್ಲಿ ಶಿವಕುಮಾರ್  ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಯತೀಂದ್ರ ಅವರ ಹೇಳಿಕೆ ಹಾಗೂ ಬೇರೆ ಶಾಸಕರ ವಿರುದ್ಧ ಕೈಗೊಳ್ಳುವ ಶಿಸ್ತು ಕ್ರಮ ಅವರ ವಿರುದ್ಧ ಯಾಕೆ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳಿದಾಗ, “ಈ ಸಂದರ್ಭದಲ್ಲಿ ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸೂಕ್ತ ಸಮಯದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6 ಸಾವಿರ ಮತಗಳನ್ನು ತಿರುಚಲಾಗಿತ್ತು ಎಂದು ಎಸ್ಐಟಿ ದೃಢಪಡಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ಯಾವುದೇ ಅನುಮಾನವಿಲ್ಲ. ದೂರವಾಣಿ ಸಂಖ್ಯೆಗಳ ಮೂಲಕ ಈ ಕೆಲಸ ಮಾಡಿದ್ದಾರೆ. ಈ ಬಗ್ಗೆ ಆ ಸಮಯದಲ್ಲೇ ಅಧಿಕಾರಿಗಳು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net