ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

bjp vs congress
Published on

ಬೆಂಗಳೂರು: ಈ ಹಿಂದೆ ಬಿಜೆಪಿ ಸರ್ಕಾರ(BJP Government) ಆಡಳಿತದಲ್ಲಿದ್ದ ವೇಳೆ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾಯ್ದೆಯನ್ನು(Prohibition Of Conversion Act) ಇಂದಿನ ಸಚಿವ ಸಂಪುಟ ಸಭೆ ರದ್ದುಗೊಳಿಸಲು ಮಾಡಿದ ತೀರ್ಮಾನದ ಕುರಿತು ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್(Tweet) ಮಾಡುವ ಮೂಲಕ ರಾಜ್ಯ ಸರ್ಕಾರ ಮತ್ತು ಸಿದ್ದರಾಮಯ್ಯ(Siddaramaiah) ವಿರುದ್ಧ ಗುಡುಗಿರುವ ಯತ್ನಾಳ್, "ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು ಹಿಂದೂ ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ?" ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.

ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ! ಇನ್ನು ಮುಂದೆ ಮಹದೇವಪ್ಪನೂ 'ಕನ್​ವರ್ಟ್', ಕಾಕಾ ಪಾಟಿಲನೂ 'ಕನ್​ವರ್ಟ್' ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯನವರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್(Basanagowda patil Yathnal) ಕಿಡಿಕಾರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net