ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಲ್ಲ... ಬಲಿಪಶು ಮಾಡುತ್ತಿದ್ದಾರೆ; ಯತ್ನಾಳ್

Basangouda Patil Yatnal
Published on

ವಿಜಯಪುರ: ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಈಗಾಗಲೇ ಘೋಷಿಸಿಕೊಂಡಿದ್ದಾರೆ. ಇದೀಗ ಈ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುತ್ತಾ, 5 ವರ್ಷ ಸಿಎಂ ಆಗಿದ್ದವರಿಗೆ ಈ ಪರಿಸ್ಥಿತಿ ಬರಬಾರದಿತ್ತು. ಕಾಂಗ್ರೆಸ್​ನವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ. ಬದಲಾಗಿ ಅವರನ್ನು ಬಲಿಪಶು ಮಾಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ಮರದ ಭದ್ರತೆಗೆ ಇದುವರೆಗೂ ಖರ್ಚಾಗಿದ್ದು 64 ಲಕ್ಷ ರೂ.!

ಸಿದ್ದರಾಮಯ್ಯ ಅವರ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬಾರದು. ನಾಳೆ ಗೂಂಡಾನನ್ನು ಸಿಎಂ ಮಾಡಿದರೆ ನಾವು, ನೀವು ಸೇರಿಯೇ ಸಾಯುತ್ತೇವೆ ಎಂದು ಹೇಳುವ ಮೂಲಕ ಯತ್ನಾಳ್ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

ಅತಿಯಾದ ಮುಸ್ಲಿಂ ತುಷ್ಟಿಕರಣ ಸಿದ್ದರಾಮಯ್ಯ ಅವರ ಈ ಸ್ಥಿತಿಗೆ ಕಾರಣ. ಸಿದ್ದರಾಮಯ್ಯ ಒನ್ ಸೈಡ್ ಹೋಗಿದ್ದಾರೆ, ಎಲ್ಲ ಜನಾಂಗಗಳನ್ನ ಪ್ರೀತಿ ಮಾಡಬೇಕು. ಒಂದೆ ಜನಾಂಗವನ್ನು ತಲೆ ಮೇಲೆ ಕೂರಿಸಿಕೊಂಡರೆ, ಉಳಿದವರು ಬುದ್ಧಿ ಕಲಿಸುತ್ತಾರೆ. ವರುಣಾ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಅಷ್ಟು ಸುಲಭವಾಗಿಲ್ಲ. ವರುಣಾದಲ್ಲೂ ಸಿದ್ದರಾಮಯ್ಯ ಗೆಲ್ಲೋದು ಕಷ್ಟವಿದೆ. ಮೊದಲು ಜನ ಮುಗ್ದರಿದ್ದರು, ಓಟು ಹಾಕುತ್ತಿದ್ದರು. ಈಗ ಯಾರು ಏನು ಮಾಡಿದ್ದಾರೆ ಎನ್ನುವ ಪಟ್ಟಿ ಜನರ ಬಳಿ ಇದೆ ಎಂದು ಯತ್ನಾಳ್ ಹೇಳಿದರು. ಇದನ್ನೂ ಓದಿ: ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಮರು 4% ಮೀಸಲಾತಿ ಪಡೆದುಕೊಂಡಿದ್ದರು! ಪ್ರತಾಪ್ ಸಿಂಹ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net