ರಾಜ್ಯದಲ್ಲಿ ಮುಂಗಾರು ಇನ್ನಷ್ಟು ಬಿರುಸು: ನಾಳೆ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

rain
Published on

ಬೆಂಗಳೂರು: ನಾಲ್ಕೈದು ದಿನಗಳಲ್ಲಿ ನೈಋತ್ಯ ಮುಂಗಾರು ಮಾರುತಗಳು ಇನ್ನಷ್ಟು ಪ್ರಬಲಗೊಳ್ಳುವ ಸಾಧ್ಯತೆ ಇರುವುದರಿಂದ ರಾಜ್ಯದಲ್ಲಿ ಜೋರು ಮಳೆ ಬೀಳಲಿದೆ. ಕೆಲವು ಭಾಗಗಳಲ್ಲಿ ಈಗಾಗಲೇ ಭರ್ಜರಿ ವರ್ಷಧಾರೆಯಾಗಿದ್ದು, ಭಾನುವಾರ ಬೆಳಗಾವಿಯ ಹಿಡಕಲ್ ಡ್ಯಾಂ 80 ಮಿಮೀ ಮತ್ತು ಬೆಂಗಳೂರು 70 ಮಿಮೀ ಮಳೆಯಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಜೂ. 20ರಿಂದ ಜೂ.23ರವರೆಗೆ ಭಾರಿ ಮಳೆ ಬೀಳುವ ಮೂನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೈಸೂರು, ರಾಮನಗರ, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.

ದೇಶಾದ್ಯಂತ ಜೂ.23ರ ನಂತರ ಮುಂಗಾರು ಪ್ರಬಲಗೊಳ್ಳಲಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net