ರಾಜ್ಯದಲ್ಲಿ ಇಂದು ಭಾರಿ ಮಳೆ.. 8ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​..!

rain
Published on

ಬೆಂಗಳೂರು: ರಾಜ್ಯಾದ್ಯಂತ ಪೂರ್ವಮುಂಗಾರು ಚುರುಕುಗೊಂಡಿದ್ದು, ಭಾನುವಾರ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 8 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ದಕ್ಷಿಣ ಕನ್ನಡ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡುಗು ಜಿಲ್ಲೆಗಳಿಗೆ ಇಲಾಖೆ ‘ಯೆಲ್ಲೊ ಅಲರ್ಟ್’ ನೀಡಿದೆ. ಇನ್ನುಳಿದ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯ ಬಗ್ಗೆಯೂ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸೂಚನೆ ನೀಡಲಾಗಿದೆ.

15ರವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಿಗೆ ‘ಆರೆಂಜ್’ ಹಾಗೂ ‘ಯೆಲ್ಲೊ’ ಅಲರ್ಟ್ ನೀಡಿರುವ ಇಲಾಖೆ, ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net