ಶೀಘ್ರವೇ ಈ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ..!?

pushkar dhami
Published on

ಉತ್ತರಾಖಂಡ: ದೇಶದಲ್ಲಿ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ಭೇಟಿ ಮಾಡಿ ರಾಜ್ಯದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕರಡು ಕುರಿತು ಚರ್ಚಿಸಿದ್ದಾರೆ.

ಈ ಚರ್ಚೆಯು ಭಾರೀ ಮಹತ್ವವನ್ನು ಪಡೆದುಕೊಂಡಿದ್ದು, ಈ ವೇಳೆ ಸಿಎಂ ಜತೆಗೆ ಉತ್ತರಾಖಂಡ ಯುಸಿಸಿ ಕರಡು ರಚನೆ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಕೂಡ ಜತೆಗಿದ್ದರು. ಬಳಿಕ ಈ ಕುರಿತು ಮಾತನಾಡಿದ ಧಾಮಿ, ಶೀಘ್ರದಲ್ಲೇ ಯುಸಿಸಿ ರಾಜ್ಯದಲ್ಲಿ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಖಾಸಗಿ ಅಂಗದಲ್ಲಿ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಬಚ್ಚಿಟ್ಟು ಸಾಗಾಟ

ಈ ಹಿಂದೆ ಧಾಮಿ, ರಾಜ್ಯದ ಜನತೆಗೆ ನೀಡಿದ ಭರವಸೆಯಂತೆ ಜೂನ್ 30ರಂದು ಏಕರೂಪ ನಾಗರಿಕ ಸಂಹಿತೆಯ ಕರಡು ಸಿದ್ಧಪಡಿಸಲು ರಚಿಸಿದ್ದ ಸಮಿತಿ ತನ್ನ ಕಾರ್ಯವನ್ನು ಪೂರ್ಣಗೊಳಿಸಿದೆ. ದೇವಭೂಮಿ ಉತ್ತರಾಖಂಡದಲ್ಲಿ ಶೀಘ್ರವೇ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಟ್ವೀಟ್​ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಧಾಮಿ ಪ್ರಧಾನಿಯನ್ನು ಭೇಟಿಯಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ಧಾಮಿ ಪ್ರಧಾನಿಯೊಂದಿಗಿನ ಚರ್ಚೆ ಗುಟ್ಟನ್ನು ಬಿಟ್ಟು ಕೊಟ್ಟಿಲ್ಲ. ಆದರೆ ಜೋಶಿಮಠ, ಚಾರ್ ಧಾಮ್ ಯಾತ್ರೆಯಿಂದ ಸಂತ್ರಸ್ತರಾದ ಜನರಿಗೆ ನೆರವು ನೀಡುವ ವಿಷಯ ಮತ್ತು ರಾಜ್ಯದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹಣೆಯಲ್ಲಿ ಹೆಚ್ಚಳ ಸೇರಿದಂತೆ ಇತರ ವಿಷಯಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net