ಯೋಗಾಸನದಲ್ಲಿ ಚಿನ್ನದ ಪದಕ ಗೆದ್ದ ಶಿಕ್ಷಕರ ಮಗಳು ರಜತ ರಾಷ್ಟ್ರಮಟ್ಟಕ್ಕೆ ಆಯ್ಕೆ

Yoga Girl
Published on

ತೀರ್ಥಹಳ್ಳಿ: ಯೋಗಪಟು ಡಿ. ರಜತ ಯೋಗಾಸನದಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ತೀರ್ಥಹಳ್ಳಿ ಹಿರಿಮೆಗೆ ಮತ್ತೊಂದು ಗರಿ ಸೇರಿಸಿದ್ದಾಳೆ.

ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆದ ರಾಜ್ಯಮಟ್ಟದ ಎಸ್​​​ಜಿ ಎಫ್​​​​ಐ ಯೋಗಾಸನ ಸ್ಪರ್ಧೆಯಲ್ಲಿ ಡಿ. ರಜತ ಅತ್ಯುತ್ತಮ ಪ್ರದರ್ಶನ ನೀಡಿದ್ದಳು. ಯೋಗಪಟು ರಜತ ಪ್ರಾಥಮಿಕ ಶಿಕ್ಷಣವನ್ನು ಪಟ್ಟಣದ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡೆದಿದ್ದಳು. ಪ್ರಸ್ತುತ 9ನೇ ತರಗತಿಯನ್ನು ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಪ್ರತಿಭಾವಂತ ವಿದ್ಯಾರ್ಥಿನಿ, ಶಿಕ್ಷಕರಾದ ಕೆ. ಎನ್. ದಾನೇಶ್ ಮತ್ತು ನಾಗರತ್ನ ದಂಪತಿಯ ಪುತ್ರಿಯಾಗಿದ್ದಾಳೆ.

ದಾನೇಶ್ ಅವರು ಆರಗ ಪ್ರೌಢಶಾಲೆ ಹಾಗೂ ಪತ್ನಿ ನಾಗರತ್ನ ಹಿರಿಯ ಪ್ರಾಥಮಿಕ ಶಾಲೆ ಕುರುವಳ್ಳಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ರಜತ ಸಾಧನೆಗೆ ಇಡೀ ತೀರ್ಥಹಳ್ಳಿ ಜನ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net