ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ್‌!

ram mandir
Published on

ಅಯೋಧ್ಯೆ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಎರಡು ದಿನಗಳ ಪ್ರವಾಸಕ್ಕೆ ಅಯೋಧ್ಯೆಗೆ ಭೇಟಿ ನೀಡಿದ್ದು, ಅಲ್ಲಿ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ರಾಮ್ ಲಲ್ಲಾನ ವಿಗ್ರಹದ ಮುಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ನಮಸ್ಕರಿಸುತ್ತಿರುವ ವಿಡಿಯೋದಲ್ಲಿ ವೈರಲ್ ಆಗಿದೆ. ಶ್ರೀರಾಮ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು, ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಮತ್ತೊಂದು ಮಹತ್ವದ ಧಾರ್ಮಿಕ ಸ್ಥಳವಾದ ಹನುಮಾನ್‌ಗರ್ಹಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಅಧಿಕೃತ ಪ್ರಕಟಣೆಯ ಪ್ರಕಾರ, ಅಯೋಧ್ಯೆಯಲ್ಲಿ ಅಭಿವೃದ್ಧಿ ಯೋಜನೆಗಳು ಮತ್ತು ಕಾನೂನು ಜಾರಿಯನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಸಭೆಯನ್ನು ಕರೆಯಲಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಬಿಜೆಪಿ ಪದಾಧಿಕಾರಿಗಳನ್ನು ಭೇಟಿ ಮಾಡಿ, ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕ್ಷೇತ್ರ ಪರಿಶೀಲನೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬುಧವಾರ ಸಿಎಂ ಆದಿತ್ಯನಾಥ್ ಅವರು ಬ್ರಹ್ಮಲಿನ್ ಪರಮಹಂಸ ರಾಮಚಂದ್ರ ದಾಸ್ ಮಹಾರಾಜರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ನಂತರ ದಿಗಂಬರ ಅಖಾಡದಲ್ಲಿ ಸಂತರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಭಂಡಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ. ಈ ಘಟನೆಗಳ ನಂತರ ಮುಖ್ಯಮಂತ್ರಿಗಳು ಅಯೋಧ್ಯೆಯಿಂದ ಅಂಬೇಡ್ಕರ್ ನಗರಕ್ಕೆ ತೆರಳಲಿದ್ದಾರೆ ಎಂದು ಅದು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net