ಜೆಡಿಎಸ್ ಭದ್ರಕೋಟೆಯಲ್ಲಿ ಯೋಗಿ ಹವಾ; ರೋಡ್ ಶೋ ಮೂಲಕ ಭರ್ಜರಿ ಪ್ರಚಾರ

Yogi
Published on

ಮಂಡ್ಯ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಕ್ಕರೆ ನಾಡು ಮಂಡ್ಯಕ್ಕೆ ಬಂದಿಳಿದಿದ್ದಾರೆ. ಸಂಜಯ ವೃತ್ತದಿಂದ ಮಹಾವೀರ ವೃತ್ತದವರೆಗೆ ರೋಡ್ ಶೋನಲ್ಲಿ ಯೋಗಿ ಪಾಲ್ಗೊಂಡಿದ್ದಾರೆ. ಸುಮಾರು 800 ಮೀ ದೂರ ಸಾಗಿದ ರೋಡ್ ಶೋ ವೀಕ್ಷಿಸಲು ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.

ರೋಡ್​ ಶೋನಲ್ಲಿ ಯೋಗಿ ಆದಿತ್ಯನಾಥ್ ಜನರತ್ತ ಕೈಬೀಸುತ್ತಿದ್ದರು, ಜನರು ಹೂಮಳೆ ಸುರಿಸಿದರು. ಸಾದಿಯುದ್ದಕ್ಕೂ ಯೋಗಿ... ಯೋಗಿ... ಎಂಬ ಘೋಷಣೆ ಮೊಳಗಿತು. ರೋಡ್​ಶೋನಲ್ಲಿ ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್​, ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಯೋಗಿ ಆದಿತ್ಯನಾಥ್ ಅವರಿಗೆ ಸಾಥ್ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net