ಯೋಗಿ ಆದಿತ್ಯನಾಥ​ಗೆ ಸಿದ್ದರಾಮಯ್ಯ ಸವಾಲ್​

yogi adithyanath
Published on

ಬೆಂಗಳೂರು: ಮಹಿಳಾ ಮೀಸಲು ವಿಧೇಯಕ ಈಗ ರಾಜಕೀಯ ವಾಕ್ಸಮರಗಳಿಗೆ ಕಾರಣವಾಗುತ್ತಿದೆ. ಬಿಜೆಪಿ ಮಹಿಳಾ ಮೀಸಲು ಕ್ರೆಡಿಟ್​ ಅನ್ನು ಪ್ರಧಾನಿ ಮೋದಿಗೆ ನೀಡಿದರೆ, ಕಾಂಗ್ರೆಸ್​ ಸೋನಿಯಾ ಗಾಂಧಿ, ರಾಜೀವ್​ ಗಾಂಧಿ, ರಾಹುಲ್​ ಗಾಂಧಿಗೆ ಕ್ರೆಡಿಟ್​ ನೀಡುತ್ತಿದೆ. ಈ ನಡುವೆ ಆರೋಪ ಪ್ರತ್ಯಾರೋಪ ಕೂಡ ನಡೆದಿದೆ.

ಇದೇ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕುಟುಕಿದ್ದಾರೆ.

ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸಂಸದರಾಗಿದ್ದ ವೇಳೆ ಆದಿತ್ಯನಾಥ್​ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು. ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್‌ ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು” ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಈ ವೇಳೆ ಕೇಳಬಯಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net