ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಬಿ.ಆರ್.ಪಾಟೀಲ್ ಅಧಿಕಾರ ಸ್ವೀಕಾರ

BR Patil
Published on

ಬೆಂಗಳೂರು:

ಮುಖ್ಯಮಂತ್ರಿ ರಾಜಕೀಯ ಸಲಹೆಗಾರರ ಹುದ್ದೆಗೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಆಳಂದ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಿ.ಆರ್.ಪಾಟೀಲ್ ಅವರು ಮಂಗಳವಾರ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ವಿಧಾನ ಸೌಧದ 3ನೇ ಮಹಡಿಯ ತಮ್ಮ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಇದೇ ವೇಳೆ ಮಾತನಾಡಿದ ಬಿ.ಆರ್.ಪಾಟೀಲ್ ಅವರು, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಬಲವರ್ಧನೆಗಾಗಿ ಕ್ರಮಗಳನ್ನು ಕೈಗೊಳ್ಳಲು ಶ್ರಮಿಸಲಾಗುವುದು ಹಾಗೂ ಕರ್ನಾಟಕದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಾಂಖ್ಯಿಕ ಮತ್ತು ಯೋಜನಾ ಇಲಾಖೆಯ ಕಾರ್ಯದರ್ಶಿ ವಿಶಾಲ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net