ಮದುವೆಯಾಗಲು ಕನ್ಯೆ ಸಿಗಲಿಲ್ಲವೆಂದು ಯುವ ರೈತ ಆತ್ಮಹತ್ಯೆ | Farmer

dk - 2025-02-21T145412.131
Published on

ಹಾವೇರಿ: ಮದುವೆಯಾಗಲು ಕನ್ಯೆ ಸಿಗಲಿಲ್ಲವೆಂದು ಯುವ ರೈತರೊಬ್ಬರು(Farmer) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಗ್ರಾಮದ ಪ್ರಕಾಶ ಬಸವರಾಜ ಹೂಗಾರ (35) ಮೃತ ರೈತ. ಇವರು 10-12 ವರ್ಷಗಳಿಂದ ಮದುವೆ ಮಾಡಿಕೊಳ್ಳಲೆಂದು ಕನ್ಯೆ ಹುಡುಕುತ್ತಿದ್ದರು. ಆದರೆ, ಯಾವುದೆ ಕನ್ಯೆ ಸಿಗದ ಕಾರಣ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net