

ಉತ್ತರ ಕನ್ನಡ: ಮದುವೆಯಾಗಲು ಕನ್ಯೆ ಸಿಗಲಿಲ್ಲ ಅಂತ ಮನನೊಂದು ಯುವಕನೊಬ್ಬ ಸಾವಿಗೆ ಶರಣಾಗಿರುವ ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ.
ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. ಈತ ತೇಲಂಗಾರದ ಕಿರಗಾರಿಮನೆಯ ನಿವಾಸಿ. ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಾಗರಾಜ ಗಾಂವ್ಕರ್, ಕೃಷಿ ಕೆಲಸ ಮಾಡಿಕೊಂಡಿದ್ದ. ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಅಂತ ಮನನೊಂದಿದ್ದ. ಈ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು ತನ್ನ ಬದುಕನ್ನೇ ಅಂತ್ಯಗೊಳಿಸಿದ್ದಾನೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)