VIDEO| ಜಿಮ್​ನಲ್ಲಿ ವರ್ಕೌಟ್​ ಮಾಡುವಾಗಲೇ ಹೃದಯಾಘಾತದಿಂದ ಪ್ರಾಣಬಿಟ್ಟ ಯುವಕ

Gym Heart Attack
Published on

ಘಾಜಿಯಾಬಾದ್​: ಕಳೆದ ಕೆಲ ದಿನಗಳಿಂದ ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅತಿಯಾದ ವ್ಯಾಯಾಮ, ಪ್ರೋಟೀನ್​ ಶೇಕ್, ಹೆಚ್ಚಿನ ಒತಡ ​​ಸೇರಿದಂತೆ ಇತರೆ ಅಂಶಗಳಿಂದ ಹೃದಯಾಘಾತ ಸಂಭವಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ.

ಇದೀಗ ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಯುವಕನೊಬ್ಬ ಹಠಾತ್​ ಕುಸಿದು ಬಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಮೃತರನ್ನು ಬಿಹಾರ ಮೂಲದ ಸಿದ್ಧಾರ್ಥ್​ಕುಮಾರ್​ ಸಿಂಗ್​ (19) ಎಂದು ಗುರುತಿಸಲಾಗಿದೆ. ಘಾಜಿಯಾಬಾದ್​ನ ಸರಸ್ವತಿ ವಿಹಾರದಲ್ಲಿರುವ ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಥ್ರೆಡ್​ಮಿಲ್​ನಲ್ಲಿ ವ್ಯಾಯಾಮ ಮಾಡುವಾಗ ಹಠಾತ್​ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಮತ್ತಿಬ್ಬರು ಕೂಡಲೇ ಅವರ ರಕ್ಷಣೆಗೆ ಧಾವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರು ಯುವಕ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಯುವಕನ ಮೃತದೇಹವನ್ನು ಆತನ ಪೋಷಕರು ಬಿಹಾರದಲ್ಲಿರುವ ಸ್ವಗ್ರಾಮಕ್ಕೆ ಕೊಂಡೊಯ್ದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net