ಗ್ಯಾಸ್ಟ್ರಿಕ್​​ ಚಿಕಿತ್ಸೆಗೆ ಆಸ್ಪತ್ರೆಗೆ ಹೋದ ಮಗನ ಜೀವವೇ ಹೋಯ್ತು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದ ಕಣ್ಣೀರಿಟ್ಟ ತಂದೆ

ctd crime
Published on

ಚಿತ್ರದುರ್ಗ: ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಹೋಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ನಯಾಜ್ (18) ಮೃತ ದುರ್ದೈವಿ. ಚಿತ್ರದುರ್ಗದ ಗೋಪಾಲಪುರದ ನಿವಾಸಿಯಾಗಿದ್ದಾನೆ. ಗ್ಯಾಸ್ಟ್ರಿಕ್‌ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದು ಸಾವನ್ನಪ್ಪಿದ್ದಾನೆ. ಮಗನ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಕಿಡಿಕಾರಿದ್ದಾರೆ.

ಗ್ಯಾಸ್ಟ್ರಿಕ್‌ನಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದ ನಯಾಜ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. ಇತ್ತ ವೈದ್ಯರ ನಿರ್ಲಕ್ಷ್ಯದಿಂದಲೇ ಯುವಕ ಮೃತಪಟ್ಟಿದ್ದಾನೆ. ನಿನ್ನೆ ಶುಕ್ರವಾರ ನಯಾಜ್‌ನನ್ನು ಆಸ್ಪತ್ರೆಗೆ ದಾಖಲು ಮಾಡಿದಾಗ ಯಾವೊಬ್ಬ ವೈದ್ಯಾಧಿಕಾರಿಗಳೂ ಬಂದಿಲ್ಲ. ಹೀಗಾಗಿ ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆಮ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ನನ್ನ ಮಗ ಸತ್ತು ಹೋದ, ನಾನೇನು ಮಾಡಲಿ ಎಂದು ನಯಾಜ್‌ ತಂದೆಯ ಅಸಹಾಯಕದ ಮಾತುಗಳನ್ನಾಡಿದರು. ಮಗನ ಸಾವಿಗೆ ನ್ಯಾಯಕ್ಕಾಗಿ ಕೊಡಿಸಿ ಎಂದು ಹಂಗಲಾಚಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net