ಯುವಜನರು ಸಾಹಿತ್ಯದ ಆಸಕ್ತಿ ಬೆಳೆಸಿಕೊಳ್ಳಿ

ಪಿರಿಯಾಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಸಾಪ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಸಾಪ ತಾಲೂಕು ಘಟಕದ ಅಧ್ಯಕ್ಷ ನವೀನ್‌ಕುಮಾರ್,ಪ್ರವೀಣ್, ಮಹದೇವ್, ಸ್ವಾಮಿ, ಅವಿನಾಶ್, ಪ್ರಸಾದ್, ಕೆ.ಎಲ್.ಅವಿನಾಶ್, ದಿವ್ಯ, ಶಿಲ್ಪ ಇತರರು ಇದ್ದಾರೆ.
ಪಿರಿಯಾಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಸಾಪ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಸಾಪ ತಾಲೂಕು ಘಟಕದ ಅಧ್ಯಕ್ಷ ನವೀನ್‌ಕುಮಾರ್,ಪ್ರವೀಣ್, ಮಹದೇವ್, ಸ್ವಾಮಿ, ಅವಿನಾಶ್, ಪ್ರಸಾದ್, ಕೆ.ಎಲ್.ಅವಿನಾಶ್, ದಿವ್ಯ, ಶಿಲ್ಪ ಇತರರು ಇದ್ದಾರೆ.
Published on

ಪಿರಿಯಾಪಟ್ಟಣ: ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಮಾದಕ ವಸ್ತುಗಳ ಸೇವನೆ ಗೀಳು ಹೆಚ್ಚುತ್ತಿರುವುದು ಆತಂಕದ ಸಂಗತಿ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ನವೀನ್‌ಕುಮಾರ್ ಹೇಳಿದರು.

ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಕಸಾಪ ಸಂಸ್ಥಾಪನಾ ದಿನಾಚರಣೆ ಮತ್ತು ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯುವಕರು ಕ್ರಿಕೆಟ್ ಬೆಡ್ಡಿಂಗ್, ವ್ಹೀಲಿಂಗ್, ಮೊಬೈಲ್ ಗೇಮಿಂಗ್ ಮುಂತಾದ ಗೀಳಿಗೆ ಬಿದ್ದು ತಮ್ಮ ಅಮೂಲ್ಯ ಸಮಯವನ್ನು ಹಾಳು ಮಾಡಿಕೊಂಡು ಭವಿಷ್ಯವನ್ನು ಕತ್ತಲು ಮಾಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಸಾಹಿತ್ಯ, ನಾಟಕ ಮುಂತಾದವುಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಚಾರಣ, ಪಕ್ಷಿವೀಕ್ಷಣೆ, ವನ್ಯಜೀವಿ ಅಧ್ಯಯನ ಸೇರಿದಂತೆ ಇನ್ನಿತರ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಅನೇಕ ಸಂಸ್ಥೆಗಳು ಕನ್ನಡ ಸಾಹಿತ್ಯ, ಕವಿಗಳು ಮತ್ತು ಪುಸ್ತಕಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು, ಇಂಥಹ ಸಂಘಟನೆಗಳೊಂದಿಗೆ ಸೇರಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನಾಡು, ನುಡಿಗೆ ತಮ್ಮದೇ ಆದ ಕೊಡುಗೆ ನೀಡಿದಂತಾಗುತ್ತದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರವೀಣ್ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್‌ನಿಂದ ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು ಅತಿದೊಡ್ಡ ಸಂಘಟನೆಯಾಗಿ ಬೆಳೆದಿದ್ದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿ ಜೀವನದಲ್ಲಿಯೇ ಕಥೆ, ಕಾಂದಬರಿಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಇದರಿಂದ ಅಪಾರ ಜ್ಞಾನ ಹೆಚ್ಚಾಗುವುದಲ್ಲದೇ ಓದಿಗೂ ಅನುಕೂಲವಾಗಲಿದೆ. ಅಲ್ಲದೆ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯ ಅಗತ್ಯವಾಗಿದ್ದು, ಯುವಜನತೆ ಇದರ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ತಿಳಿಸಿದರು.

ರಸಪ್ರಶ್ನೆ ಕಾರ್ಯಕ್ರಮ: ಈ ಸಂದರ್ಭದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಹು ಆಯ್ಕೆಯ ಪ್ರಶ್ನೆಗಳಿಗೆ ಉತ್ತರಿಸಿದರು. ಇದರಲ್ಲಿ ಪ್ರಥಮ ಬಹುಮಾನವನ್ನು ಕೀರ್ತಿಕುಮಾರ್ ಪಡೆದರೆ ದ್ವಿತೀಯ ಬಹುಮಾನವನ್ನು ಅನನ್ಯ ಮತ್ತು ಮುತ್ತುರಾಜ್ ಹಂಚಿಕೊಂಡರು. ತೃತೀಯ ಬಹುಮಾನ ಹೇಮಂತ್ ಮತ್ತು ಯಶಸ್ವಿನಿ ಪಡೆದುಕೊಂಡರೆ ಜೆ.ಜಿ.ಕಾರ್ತಿಕ್ ಮತ್ತು ಸುನೀಲ್ ಸಮಾಧಾನಕರ ಬಹುಮಾನ ಪಡೆದುಕೊಂಡರು. ವಿಜೇತರಿಗೆ ನಗದು ಮತ್ತು ಕನ್ನಡದ ಮಹನೀಯರ ಪರಿಚಯದ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ರಾವಂದೂರು ಕಸಾಪ ಹೋಬಳಿ ಅಧ್ಯಕ್ಷ ಶೆಟ್ಟಹಳ್ಳಿ ಮಹದೇವ್, ಉಪನ್ಯಾಸಕರಾದ ಸ್ವಾಮಿ, ಅವಿನಾಶ್, ಪ್ರಸಾದ್, ಕೆ.ಎಲ್.ಅವಿನಾಶ್, ದಿವ್ಯಾ, ಶಿಲ್ಪಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net