ಚಿಕಿತ್ಸೆ ನೀಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ದಂತ ವೈದ್ಯ

doctor jan 2020
Published on

ಮಂಗಳೂರು: ಚಿಕಿತ್ಸೆ ನೀಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ದಂತ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಬಂದಾಗ ವೈದ್ಯ ಡಾ. ಸುಧಾಕರ್​ ಲೈಂಗಿಕ ಕಿರುಕುಳ ನೀಡಿದರು ಎಂದು 23 ವರ್ಷದ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.

ದೂರು ದಾಖಲಿಸಿದ ಪೊಲೀಸರು ವೈದ್ಯನನ್ನು ಬಂಧಿಸಿ ವಿಚಾಣೆಗೆ ಒಳಪಡಿಸಿದ್ದಾರೆ. ಡಾ. ಸುಧಾಕರ್​ ಮೇಲೆ ಹಿಂದೆ ಇದೇ ರೀತಿ ಆರೋಪಗಳು ಕೇಳಿ ಬಂದಿದ್ದವು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net