

Actress Ramya: ತನ್ನ ವಿರುದ್ಧ ತೀರಾ ಕೊಳಕು ಕಾಮೆಂಟ್ಗಳನ್ನು ಮಾಡಿದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕೊನೆಗೂ ದೂರು ದಾಖಲಿಸಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದ್ದ ಪೋಸ್ಟ್ ವಾರ್ ಇದೀಗ ಕಾನೂನು ಸಮರ ಶುರುವಾಗಿದೆ.
ಇದರ ನಡುವೆ ನಟ ದರ್ಶನ್ ಫ್ಯಾನ್ಸ್ ವಿರುದ್ಧ ಏಕಾಂಗಿ ಆಗಿ ಗುಡುಗಿದ್ದ ನಟಿ ರಮ್ಯಾಗೆ ಈ ವಿಚಾರದಲ್ಲಿ ಮಹಿಳಾ ಆಯೋಗ ಸೇರಿದಂತೆ ಒಬ್ಬೊಬ್ಬರಾಗಿ ಬೆಂಬಲ ನೀಡುತ್ತಿದ್ದಾರೆ. ಇದೀಗ ಸ್ಯಾಂಡಲ್ವುಡ್ ನಟ ಚಕ್ರವರ್ತಿ ಶಿವರಾಜಕುಮಾರ್ ಸೇರಿದಂತೆ ಗೀತಾ ಶಿವರಾಜಕುಮಾರ್ ಮತ್ತು ಯುವರಾಜಕುಮಾರ್ ಕೂಡ ಸಾಥ್ ನೀಡಿದ್ದಾರೆ. ಅಲ್ಲದೆ, ಫ್ಯಾನ್ಸ್ ವಿರುದ್ಧ ಗುಡುಗಿರುವ ನಟಿ ರಮ್ಯಾಗೆ ಸಾಥ್ ನೀಡುವ ಮೂಲಕ ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ ಎಂದಿದ್ದಾರೆ.
ಇದನ್ನೂ ಓದಿ:ಆಪರೇಷನ್ ಸಿಂಧೂರ ವೇಳೆ ಅನಾಥರಾಗಿದ್ದ 22 ಮಕ್ಕಳನ್ನು ದತ್ತು ತೆಗೆದುಕೊಂಡ ರಾಹುಲ್| Rahul Gandhi ಶಿವಣ್ಣ ಹೇಳಿದ್ದೇನು? ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ:ಪಾಕ್ನಿಂದಲೇ ಪಹಲ್ಗಾಮ್ ದಾಳಿ, ನಮ್ಮ ಬಳಿ ಸಾಕ್ಷಿ ಇದೆ: ಚಿದಂಬರಂಗೆ ತಿರುಗೇಟು ಕೊಟ್ಟ ಅಮಿತ್ ಷಾ! Pahalgam attack ಇದೆಲ್ಲ ಶುರುವಾಗಿದ್ದು ಯಾವಾಗ? ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ (ಜಾಮೀನು ರದ್ದು ಕೋರಿ) ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜುಲೈ 24ರಂದು ಎರಡೂ ಕಡೆಯ ವಾದನ್ನು ಆಲಿಸಿ, ತೀರ್ಪು ಕಾಯ್ದಿರಿಸಿದೆ.
ಗಮನಾರ್ಹ ಸಂಗತಿ ಏನೆಂದರೆ, ದರ್ಶನ್ಗೆ ಜಾಮೀನು ನೀಡಿರುವ ಹೈಕೋರ್ಟ್ ಕ್ರಮವನ್ನು ಸುಪ್ರೀಂಕೋರ್ಟ್ ಟೀಕಿಸಿದೆ. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್ ಹೇಳಿಕೆಗಳನ್ನು ಉಲ್ಲೇಖಿಸಿ ಲೈವ್ ಲಾ ಸುದ್ದಿ ಮಾಧ್ಯಮ ಮಾಡಿರುವ ವರದಿಯ ಸ್ಕ್ರೀನ್ಶಾಟ್ ಅನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡ ನಟಿ ರಮ್ಯಾ, ಭಾರತದ ಸಾಮಾನ್ಯ ಜನರಿಗೆ ಸುಪ್ರೀಂಕೋರ್ಟ್ ಒಂದು ಆಶಾಕಿರಣ. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದು ಬರೆದುಕೊಂಡಿದ್ದರು. ಹೀಗಾಗಿ ದರ್ಶನ್ ಅಭಿಮಾನಿಗಳು ರಮ್ಯಾ ಅವರ ವಿರುದ್ಧ ಮುಗಿಬಿದ್ದಿದ್ದಾರೆ.(ಏಜೆನ್ಸೀಸ್)